ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆ.
ದ್ವಾರಕೀಶ್ 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನನ. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಿಕ್ಷಣ: ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮಾಡಿದ್ದರು: ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದರು.
1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದರು. 1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ, ಮೇಯರ್ ಮುತ್ತಣ ಸಿನಿಮಾವನ್ನು ಸ್ವತಂತ್ರವಾಗಿ ನಿರ್ಮಿಸಿದ್ದರು. 23 ಚಿತ್ರಗಳಲ್ಲಿ ನಿಟಿಸಿ, 53 ಸಿನಿಮಾಗಳನ್ನು ನಿರ್ಮಿಸಿದ ಖ್ಯಾತಿ ದ್ವಾರಕೀಶ್‌ಗೆ ಸಲ್ಲುತ್ತದೆ.
1996ರಲ್ಲಿ ಡಾ.ರಾಜ್‌ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾದರು. ಈ ಚಿತ್ರ ಬಾಕ್ಸಾಫೀಸ್‌ನಲ್ಲಿ ಸೂಪರ್ ಹಿಟ್ ಆಯಿತು. ವರನಟ ರಾಜ್ ಜೊತೆಗೆ ನಾಲ್ಕಾರು ಸಿನಿಮಾಗಳನ್ನು ಮಾಡಿ, ನಂತರ ಅವರು ರಾಜ್ ಕ್ಯಾಂಪ್‌ನಿಂದ ಬೇರೆಯಾದರು. ವಿಷ್ಣುವರ್ಧನ್ ಅವರಲ್ಲಿ ತಮ್ಮ ಜೊತೆಗಾರನನ್ನು ಕಂಡುಕೊಂಡರು.




