IMG-20240424-WA0009_copy_335x421

 

 

ಲೋಕಸಭೆಗೆ ಎರಡನೇ ಹಂತದಲ್ಲಿ ಕರ್ನಾಟಕದಿಂದ ನಡೆಯಲಿರುವ ಚುನಾವಣೆಯಲ್ಲಿ ಉತ್ತರ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಕಾರ್ಯನಿರ್ವಹಿಸಲು ಕುಮುಟಾ ವಿಧಾನಸಭಾ ಕ್ಷೇತ್ರದ ಸಂಯೋಜಕರನ್ನಾಗಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ಅಭಿವರ್ಧಕ ಮತ್ತು ಬೂತ್ ತರಬೇತುದಾರ ಎo ಎಸ್ ಅನಂತ್ ರವರನ್ನು ನೇಮಕ ಮಾಡಿ ಕೆಪಿಸಿಸಿ ಕಾರ್ಯಧ್ಯಕ್ಷರಾಗಿರುವ  ಚಂದ್ರಶೇಖರ್ ಆದೇಶ ಹೊರಡಿಸಿರುತ್ತಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಪ್ರತ್ಯೇಕ ಸಂಯೋಜಕರನ್ನು ನಿಯೋಜನೆ ಮಾಡಿರುವ ಅವರು ಮೇ 7ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಕಾರ್ಯೋನ್ಮುಖರಾಗುವಂತೆ ಸೂಚನೆ ನೀಡಿರುತ್ತಾರೆ.

ಮೂಡಿಗೆರೆ ಕಸಬಾ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ ಎಸ್ ಅನಂತ್ ರವರನ್ನು ಈ ಹಿಂದೆ ತೆಲಂಗಾಣ ವಿಧಾನಸಭಾ ಚುನಾವಣೆಯ ವನಪರ್ತಿ ವಿಧಾನಸಭಾ ಕ್ಷೇತ್ರ ಉಸ್ತುವಾರಿಯನ್ನಾಗಿಯೂ ನೇಮಿಸಲಾಗಿತ್ತು. ಸದರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀ ತೂಡಿ ಮೇಘಾರೆಡ್ಡಿಯವರು 24 ಸಾವಿರ ಅಧಿಕ ಮತಗಳ ವಿಜಯ ಸಾಧಿಸಿದ್ದರು.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ