24mdg2A (3)

 

 

ಚುನಾವಣಾ ಆಯೋಗ ಪ್ರತಿ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಪ್ರತಿಯೊಬ್ಬರೂ ಮತದಾನ ಮಾಡಬೇಕೆಂದು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸುತ್ತದೆ. ಆದರೆ ಚುನಾವಣೆ ಕರ್ತವ್ಯಕ್ಕೆ ಬಳಸಿಕೊಂಡು ಮತದಾನದ ಹಕ್ಕು ಕಿತ್ತುಕೊಳ್ಳುವ ಕೆಲಸ ಚುನಾವಣಾ ಆಯೋಗ ಮಾಡುತ್ತಿದೆ ಎಂದು ಮೂಡಿಗೆರೆ ಸಾರಿಗೆ ವಾಹನ ಚಾಲಕರು ದೂರಿದ್ದಾರೆ.

ಪ್ರತಿ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ ನಡೆಯುವ ಹಿಂದಿನ ದಿನ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರದಿಂದ ಮತಗಟ್ಟೆಗೆ ತೆರಳುವ ಸಿಬ್ಬಂದಿ, ಇವಿಎಂ ಯಂತ್ರಗಳನ್ನು ಕೊಂಡೊಯ್ಯಲು ಜೀಪ್, ತೂಫಾನ್, ಟಿಟಿ ಟ್ರಾವೆಲ್ಸ್, ಖಾಸಗಿ ಬಸ್ ಸೇರಿದಂತೆ ನೂರಾರು ವಾಹನಗಳನ್ನು ಆರ್‍ಟಿಒ ಕಚೇರಿ ಮೂಲಕ ಪಟ್ಟಿ ಪಡೆದು ಚುನಾವಣೆ ಕರ್ತವ್ಯಕ್ಕೆ ಬಳಸಿಕೊಳ್ಳಲಾಗುತ್ತದೆ. ಈ ಚಾಲಕರಿರುವ ಮೂಲ ಸ್ಥಳ ಬಿಟ್ಟು ಹೊರ ತಾಲೂಕು ಹಾಗೂ ನೂರಾರು ಕಿ,ಮೀ ದೂರದಲ್ಲಿರುವ ಮತಗಟ್ಟೆಗೆ ಕಳಿಸಿ ಯಡವಟ್ಟು ಮಾಡುತ್ತಿರುವುದರಿಂದ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ.80 ರಷ್ಟು ಮಂದಿ ಚಾಲಕರು ತಮ್ಮ ಮೂಲ ಸ್ಥಳಕ್ಕೆ ತೆರಳಿ ಮತ ಹಾಕಲು ಸಾಧ್ಯವಾಗದೇ ಮತದಾನದಿಂದ ವಂಚಿತರಾಗಿದ್ದಾರೆಂದು ಆರೋಪಿಸಿದರು.

ಪ್ರತಿ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಸರಕಾರಿ ನೌಕರರು, ಕೆಎಸ್‍ಆರ್‍ಟಿಸಿ ಬಸ್ ಚಾಲಕರು, ವೃದ್ದರು, ವಿಶೇಷಚೇತನರು ಮತದಾನ ಮಾಡಲು ಚುನಾವಣಾ ಆಯೋಗ ತಂಡದ ಅಧಿಕಾರಿಗಳು ಮನೆ ಮನೆಗೆ ತೆರಳುವ ಮೂಲಕ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಆದರೆ ಪ್ರಜಾಪ್ರಭುತ್ವದ ಹಬ್ಬವನ್ನು ಚುನಾವಣೆ ಕರ್ತವ್ಯಕ್ಕೆ ತೆರಳುವ ಸಾರಿಗೆ ವಾಹನ ಚಾಲಕರು ಸಂಭ್ರಮಿಸಲು ಸಾಧ್ಯವಾಗುತ್ತಲೇ ಇಲ್ಲ. ನಮ್ಮ ಗೋಳು ಕೇಳುವವರೇ ಇಲ್ಲ. ಈ ಬಗ್ಗೆ ಚುನಾವಣಾ ಆಯೋಗ ಕೂಡ ಗಂಭೀರವಾಗಿ ಪರಿಗಣಿಸಿ, ಈ ಬಾರಿಯಾದರೂ ಮತದಾನದ ಹಕ್ಕು ಚಲಾಯಿಸಲು ಅವಕಾಶ ಮಾಡಿಕೊಡಬೇಕೆಂದು ಸಾರಿಗೆ ವಾಹನ ಚಾಲಕರು ಆಗ್ರಹಿಸಿದ್ದಾರೆ.

ವಾಹನ ಚಾಲಕರಾದ ಗಿರಿಜಾ ಶಂಕರ್, ಜಾಬೀರ್, ಇಸ್ಮಾಹಿಲ್, ಗಿರೀಶ್, ಯಲ್ಲೇಗೌಡ,

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ