Screenshot_2024-04-28-19-49-11-34_40deb401b9ffe8e1df2f1cc5ba480b12_copy_559x396

 

 

ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮತ್ತು ಅವರ ಪುತ್ರ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.

ರೇವಣ್ಣ ಎ1 , ಪ್ರಜ್ವಲ್‌ ಎ2 ಆರೋಪಿ:

ಹಾಸನ ಜಿಲ್ಲೆ ಹೊಳೆನರಸೀಪುರ ನಗರ ಠಾಣೆಯಲ್ಲಿ‌ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮೊದಲ ಎಫ್ ಐ ಆರ್ ದಾಖಲು ಮಾಡಲಾಗಿದೆ. ನೇರವಾಗಿ ಪ್ರಜ್ವಲ್ ರೇವಣ್ಣ ಮತ್ತು ಹೆಚ್‌ಡಿ ರೇವಣ್ಣ ವಿರುದ್ದ ಸಂತ್ರಸ್ಥೆ ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ, ಪದೇ ಪದೆ ಹಿಂಬಾಲಿಸಿ ದೌರ್ಜನ್ಯ ಎಸಗಿದ ಬಗ್ಗೆ ಆರೋಪಿಸಿದ್ದಾರೆ. ಮಹಿಳೆಯ ಘನತೆಗೆ ಧಕ್ಕೆ ಆರೋಪಿ ಸೇರಿ ಹಲವು ಐಪಿಸಿ ಸೆಕ್ಷೆನ್ ಗಳಡಿ ಕೇಸ್ ದಾಖಲಾಗಿದೆ. IPC ಸೆಕ್ಷನ್ 354A, 354D, 506, 509ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ.

ಕಳೆದ ಹಲವು ದಿನಗಳಿಂದ ಹಾಸನದಲ್ಲಿ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಗಳನ್ನು ಹಂಚಿಕೆ ಮಾಡಲಾಗುತ್ತಿತ್ತು ಇದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ವಿಡಿಯೋಗಳು ಎಂದು ಆರೋಪಿಸಲಾಗಿತ್ತು.

ಇದೀಗ ಹೆಚ್ ಡಿ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುವ ಮಹಿಳೆ ನೇರವಾಗಿ ಎಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ದೂರನ್ನು ದಾಖಲಿಸಿದ್ದಾರೆ.

ಇದರಿಂದ ಎಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ ಈ ನಡುವೆ ಪೆನ್ ಡ್ರೈವ್ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದ್ದು ಈಗಾಗಲೇ ತನಿಖೆ ಆರಂಭಿಸಲಾಗಿದೆ

ಈ ಎಲ್ಲಾ ಬೆಳವಣಿಗೆಗಳ ನಡುವೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಚುನಾವಷೆ ನಡೆದ ಮರುದಿನವೇ ವಿದೇಶಕ್ಕೆ ಪರಾರಿ ಆಗಿದ್ದಾರೆ ಎಂಬ ಆರೋಪಗಳು ಕೂಡ ಕೇಳಿಬಂದಿದೆ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ