September 13, 2026
;
ahamed bava

 

 

ಮೂಡಿಗೆರೆ ತಾಲ್ಲೂಕಉ, ಬಣಕಲ್ ಭಾಗದ ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಬಾವಾ(87) ಭಾನುವಾರ ಸಂಜೆ ಹೃದಯಾಘಾತದಿಂದ ನಿಧನರಾದರು.

ಅಹ್ಮದ್ ಭಾವಾರವರು ಹಿರಿಯ ಕಾಂಗ್ರೆಸ್ ಮುಖಂಡರಾಗಿದ್ದರು. ಅನೇಕ ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಅವರು ವಕ್ಫ್ ಮಂಡಳಿಯ ಸದಸ್ಯರಾಗಿದ್ದರು. ಬಣಕಲ್ ಹೋಬಳಿಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ  ಕಾರ್ಯನಿರ್ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಪಕ್ಷದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಮೃತರಿಗೆ ಪತ್ನಿ, ನಾಲ್ವರು ಪುತ್ರಿಯರು ಹಾಗೂ ಇಬ್ಬರು ಗಂಡು ಮಕ್ಕಳಿದ್ದಾರೆ.

ಮೃತರ ಅಂತಿಮ ದರ್ಶನದಲ್ಲಿ ಮಾಜಿ  ಸಚಿವೆ ಮೋಟಮ್ಮ, ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಗೌಡ, ಮಾಜಿ ಅಧ್ಯಕ್ಷರಾದ ಬಿ.ಎಸ್.ಜಯರಾಂಗೌಡ, ಎಂ.ಪಿ.ಮನು, ಯು.ಹೆಚ್. ಹೇಮಶೇಖರ್, ಹೋಬಳಿ ಅಧ್ಯಕ್ಷ ಟಿ.ಎಂ.ಸುಬ್ರಮಣ್ಯ, ಪ್ರಧಾನ ಕಾರ್ಯದರ್ಶಿಗಳಾದ ಸಬ್ಲಿ ದೇವರಾಜ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಅಹ್ಮದ್ ಬಾವಾ ಅವರ ಪಾರ್ಥಿವ ಶರೀರದ ಮೇಲೆ ಕಾಂಗ್ರೆಸ್ ಪಕ್ಷದ ಧ್ವಜ ಹೊದಿಸಿ ಮೃತರಿಗೆ  ಗೌರವಾರ್ಪಣೆ ಸಲ್ಲಿಸಲಾಯಿತು. ಉತ್ಸಾಹಿ ಕಾಂಗ್ರೆಸ್ ಮುಖಂಡರನ್ನು ಕಳೆದುಕೊಂಡು ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು’ಪಕ್ಷದ ಮುಖಂಡರು ತಿಳಿಸಿದರು. ಮೃತರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಬಣಕಲ್ ನಲ್ಲಿ ನೆರವೇರಿತು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;