ಹೃದಯಾಘಾತದಿಂದ ಮೂವತ್ತಾರು ವರ್ಷದ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕಿನ ಮಾಕೋನಹಳ್ಳಿ ಸಮೀಪದ ಕಾರ್ ಬೈಲ್ ಗ್ರಾಮದ ಕೆ.ಸಿ. ನಿಶಾಂತ್ ಹೃದಯಾಘಾತದಿಂದ ಮೃತಪಟ್ಟ ಯುವಕ.
ಕಾರ್ ಬೈಲ್ ಗ್ರಾಮದ ಕೃಷಿಕ ಚಂದ್ರೇಗೌಡ ಎಂಬುವವರ ದ್ವಿತೀಯ ಪುತ್ರ ನಿಶಾಂತ್ ಬೆಂಗಳೂರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಗುರುವಾರ ಸಂಜೆ ತಾನು ಕೆಲಸ ಮಾಡುತ್ತಿದ್ದ ಸ್ಥಳದ ಸಮೀಪವೇ ಹೃದಯಾಘಾತದಿಂದ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ನಿಶಾಂತ್ ಅವರ ಪಾರ್ಥೀವ ಶರೀರವನ್ನು ಹುಟ್ಟೂರಿಗೆ ತರಲಾಗಿದ್ದು, ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಕಾರ್ ಬೈಲ್ ನಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಕಟುಂಬ ಮೂಲಗಳು ತಿಳಿಸಿವೆ.
ಅವಿವಾಹಿತರಾಗಿದ್ದ ನಿಶಾಂತ್ ತನ್ನ ತಂದೆ, ತಾಯಿ, ಸಹೋದರ ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.
ಇತ್ತೀಚೆಗೆ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದು ಆತಂಕಕ್ಕೆ ಕಾರಣವಾಗುತ್ತಿದೆ.



