indavara 1

 

 

ಚಿಕ್ಕಮಗಳೂರು ಸಮೀಪದ ಇಂದಾವರ ಗ್ರಾಮದಲ್ಲಿ ಇಂದು ಮತ್ತು ನಾಳೆ ಅದ್ದೂರಿ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಇಂದು ಮುಂಜಾನೆ ಪಂದ್ಯಾವಳಿಗೆ ಚಾಲನೆ ದೊರೆಯಲಿದೆ.

ಇಂದಾವರ  ಗೌಡಾಸ್ ಪ್ರೀಮಿಯರ್ ಲೀಗ್ ಹೆಸರಿನಲ್ಲಿ ಮೇ 11 ಮತ್ತು 12 ರಂದು ಇಂದಾವರ ಗ್ರಾಮದ ನೂತನ ಕ್ರೀಡಾಂಗಣದಲ್ಲಿ ಈ ಪಂದ್ಯಾವಳಿ ಆಯೋಜನೆಗೊಂಡಿದೆ.

ಪಂದ್ಯಾವಳಿಯ ಕ್ರೀಡಾಂಗಣದಲ್ಲಿ ಪಂದ್ಯದ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣವನ್ನು ವಿಶಾಲವಾಗಿ, ಸುಸಜ್ಜಿತವಾಗಿ ನಿರ್ಮಿಸಲಾಗಿದೆ.

ಐಪಿಎಲ್ ಮಾದರಿಯಲ್ಲಿ ಆಟಗಾರರನ್ನು ವಿವಿಧ ಪ್ರಾಂಚೈಸಿಗಳು ಹರಾಜು ಮೂಲಕ ಖರೀದಿಸಿದ್ದು ವಿಶಿಷ್ಟ ರೀತಿಯ ಪಂದ್ಯಾವಳಿ ಆಯೋಜಿಸಲಾಗಿದೆ. ಒಟ್ಟು ಜಿಲ್ಲೆಯ 16 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿವೆ.

ಹೊನಲು ಬೆಳಕಿನ ಈ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ 1 ಲಕ್ಷ ಬಹುಮಾನ ಮತ್ತು ಟ್ರೋಪಿ, ಎರಡನೇ ಬಹುಮಾನ 75 ಸಾವಿರ ಮತ್ತು ಟ್ರೋಪಿ, ಮೂರನೇ ಬಹುಮಾನ 50 ಸಾವಿರ ಮತ್ತು ಟ್ರೋಪಿ, ನಾಲ್ಕನೇ ಬಹುಮಾನ 25 ಸಾವಿರ ಮತ್ತು ಟ್ರೋಪಿ ಇಡಲಾಗಿದೆ.

ಈಗ್ಗೆ ಕೆಲ ದಿನಗಳ ಹಿಂದೆ ಆಟಗಾರರ ಹರಾಜು ಪ್ರಕ್ರಿಯೆ ನಡೆಸಲಾಗಿದ್ದು, ಇಂದಿನಿಂದ ಎರಡು ದಿನಗಳ ಕಾಲ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಆಟಗಾರರಿಗೆ ತಮ್ಮ ಪ್ರತಿಭೆ ಪ್ರದರ್ಶನಕ್ಕೆ ಅದ್ದೂರಿ ವೇದಿಕೆ ಸಿದ್ದವಾಗಿದೆ.

ಪಂದ್ಯಾವಳಿಯನ್ನು ವೀಕ್ಷಿಸಲು ಇಂದಾವರ ಮತ್ತು ಸುತ್ತಮುತ್ತಲ ಗ್ರಾಮಸ್ಥರು, ಜಿಲ್ಲೆ ಹೊರಜಿಲ್ಲೆಯ ಕ್ರಿಕೆಟ್ ಪ್ರಿಯರುಉ ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆ ಇದೆ. ಇಂದಿನಿಂದ ಎರಡು ದಿನಗಳ ಕಾಲ ಜಿಲ್ಲೆಯ ಕ್ರಿಕೆಟ್ ಪ್ರಿಯರಿಗೆ ಇಂದಾವರ ಪ್ರೀಮಿಯಲ್ ಲೀಗ್ ರಸದೌತಣ ನೀಡಲು ಸಜ್ಜಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ