kalasa hundi

 

 

ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಳಸದ ಕಲಶೇಶ್ವರ ದೇವಸ್ಥಾನದ ಹುಂಡಿ ಹೊಡೆದು ಕಳ್ಳತನ ಮಾಡಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಹುಂಡಿ ಕಳ್ಳತನಕ್ಕೆ ಪ್ರಯತ್ನಿಸಿದ ಕಳ್ಳನನ್ನು ದೇವಸ್ಥಾನದ ಕಾವಲುಗಾರರು ಹಿಡಿದು ಕಳಸ ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರದ  ನಡೆದಿದೆ.

ಆರೋಪಿಯನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಬೇಗೂರು ಗ್ರಾಮದ ವಡ್ಡಿಗೇರಿಯ ಚಂದ್ರಶೇಖರ ಎಂದು ಗುರುತಿಸಲಾಗಿದೆ.

ಆರೋಪಿಯು ಭಾನುವಾರ ತಡರಾತ್ರಿ ಕಲಶೇಸ್ವರ ದೇವಸ್ಥಾನದ ಒಳಭಾಗದಲ್ಲಿರುವ ಹಣ್ಣು ಕಾಯಿ ಅಂಗಡಿಗೆ ನುಗ್ಗಿ ಅಲ್ಲಿ ಸರ,  ಇನ್ನಿತರೆ ಸಾಮಾಗ್ರಿಗಳು ಸೇರಿದಂತೆ ಚಿಲ್ಲರೆ ಹಣವನ್ನು ಕದ್ದು ಪ್ಲಾಸ್ಟಿಕ್ ಕವರ್ ನಲ್ಲಿ ತುಂಬಿಸಿ ನಂತರ  ಕಲಶೇಶ್ವರ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಹೊಡೆದು ಹಣ ಕಳ್ಳತನ ಮಾಡಲು ಯತ್ನಿಸಿದ್ದಾನೆ.ಈ ವೇಳೆ ದೇವಸ್ಥಾನದ  ಕಾವಲುಗಾರರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾನೆ.

ಕೂಡಲೇ ಆತನನ್ನು ಕಳಸ ಪೊಲೀಸರಿಗೆ ಒಪ್ಪಿಸಲಾಗಿದೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ