bus 2

 

 

ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಸಮೀಪದ ಅಜ್ಜಂಪುರ  ಕ್ರಾಸ್ ಬಳಿ ಸೋಮವಾರ ತಡರಾತ್ರಿ ನಡೆದಿದೆ.

ಈ ವೇಳೆ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ.

ಶಿವಮೊಗ್ಗದಿಂದ ಮೈಸೂರಿಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಸಿಬ್ಬಂದಿ ಸೇರಿ ಒಟ್ಟು 40 ಮಂದಿ ಪ್ರಯಾಣಿಸುತ್ತಿದ್ದರು. ಚಲಿಸುತ್ತಿದ್ದ ಬಸ್ಸಿನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಬಸ್ ಚಾಲಕ ಮತ್ತು ಸಿಬ್ಬಂದಿ ತಕ್ಷಣ ಬಸ್ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬಸ್ ಬೆಂಕಿಯಿಂದ ಸುಟ್ಟು ಕರಕಲಾಗಿದೆ.

ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ಬಾರೀ ಅನಾಹುತ ತಪ್ಪಿದೆ. ಐರಾವತ ಬಸ್ ಗಳಲ್ಲಿ ಬೆಂಕಿ ಕಾಣಿಸಿಕೊಳ್ಳುವ ಘಟನೆಗಳು ಸತತವಾಗಿ ನಡೆಯುತ್ತಿದ್ದು, ಪ್ರಯಾಣಿಕರು ಆತಂಕ ಪಡುವಂತಾಗಿದೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ