shiradi 2

 

 

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ರ ಕೆಂಪುಹೊಳೆ ಸಮೀಪ ಇನೋವಾ ಕಾರು ಹಾಗೂ ಕಂಟೇನರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ನಾಲ್ವರಿಗೆ ಗಂಭೀರ ಗಾಯವಾಗಿದೆ. ದಕ್ಷಿಣ ಕನ್ನಡ ಮೂಲದ ಶಫೀಕ್ (20), ಸಫಿಯಾ (50) ಮೃತ ದುರ್ದೈವಿಗಳು.

ಕಂಟೇನರ್ ಲಾರಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಇನೋವಾ ಕಾರು ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದಾಗ ಕೆಂಪುಹೊಳೆ ಸಮೀಪ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರು ಹಾಗೂ ಗಾಯಾಳುಗಳು ದಕ್ಷಿಣ ಕನ್ನಡದ ಬಂಟ್ವಾಳ ಮೂಲದವರು ಎಂದು ತಿಳಿದು ಬಂದಿದೆ.

 ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೃತರು ಮಂಗಳೂರು ತಾಲೂಕಿನ ಪಾಣೆಮಂಗಳೂರು ಸಮೀಪದ ಬೊಂಡಾಲ ​​ಗ್ರಾಮದವರು. ಬೆಂಗಳೂರಿನಲ್ಲಿ ಸಂಬಂಧಿಕರ ಮದುವೆ ಔತಣ ಕೂಟದಲ್ಲಿ ಪಾಲ್ಗೊಂಡು ಕುಟುಂಬ ಸಮೇತರಾಗಿ ಮಂಗಳೂರಿಗೆ ತೆರಳುತ್ತಿದ್ದಾಗ  ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗಾಗಿ ಟ್ರಕ್ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ