car 2

 

 

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಉರುಳಿದ್ದು, ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ತಾಲ್ಲೂಕು ಅಂಬಳೆ ಗ್ರಾಮದ ರಮೇಶ್ (33), ಮೃತ ದುರ್ದೈವಿ.

ಅಂಬಳೆ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ಬುಧವಾರ ತಡರಾತ್ರಿ ರಮೇಶ್‌ ಮತ್ತು ಅವರ ಸ್ನೇಹಿತ ಸಂತೋಷ್‌ ಕಾರಿನಲ್ಲಿ ಬರುವಾಗ ನಿಯಂತ್ರಣ ತಪ್ಪಿದೆ ಕಾರು ಕೆರೆಗೆ ಹಾರಿದೆ. ಕಾರು ನೀರಿನಲ್ಲಿ ಮುಳುಗಿದ್ದರಿಂದ ಹೊರಬರಲು ಆಗದೆ ರಮೇಶ್‌ ಮೃತಪಟ್ಟರೆ, ಸಂತೋಷ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರೊಳಗೆ ಇದ್ದ ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.   ಗಾಯಾಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ