kalsa3

 

 

ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಕಳಸ ತಾಲೂಕಿನ ಹಳುವಳ್ಳಿ ತಾರಿಕೊಂಡ ನಿವಾಸಿ ರಮ್ಯಾ(21) ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾರಿಕೊಂಡ ರಮೇಶ್ ಎಂಬುವವರ ಪುತ್ರಿ ರಮ್ಯಾ ಕ್ಷುಲ್ಲಕ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳಸ ಸರ್ಕಾರಿ ಪದವಿ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ರಮ್ಯಾ ಶನಿವಾರವಷ್ಟೆ ತನ್ನ 21ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದರು ಎನ್ನಲಾಗಿದೆ.

ಭಾನುವಾರ ಪೋಷಕರೆಲ್ಲ ತಮ್ಮ ಹತ್ತಿರದ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದರು. ಮದುವೆ ಮುಗಿಸಿಕೊಂಡು ಮನೆಗೆ ಬಂದಾಗ ರಮ್ಯಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಮದುವೆಗೆ ಹೋಗುವಾಗ ಸೀರೆಯ ವಿಚಾರಕ್ಕಾಗಿ ರಮ್ಯಾ ಮತ್ತು ಸಹೋದರಿ ನಡುವೆ ಜಗಳ ಆಗಿತ್ತು, ಇದರಿಂದ ತಾನು ಮದುವೆಗೆ ಹೋಗದೇ ರಮ್ಯಾ ಮನೆಯಲ್ಲೇ ಉಳಿದಿದ್ದಳು ಎನ್ನಲಾಗಿದೆ. ಮನೆಯವರೆಲ್ಲಾ ಮದುವೆಗೆ ತೆರಳಿದ ನಂತರ ರಮ್ಯಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ