ambale11

 

 

ಮುಂಗಾರು ಪೂರ್ವ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಭೇಟಿ ನೀಡಿದ್ದರು. ಕ್ಷೇತ್ರದ ವಿವಿಧ ಭಾಗಗಳಲ್ಲಿ ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು, ಅಂತಹ ಮನೆಗಳಿಗೆ ಶಾಸಕಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಹೋಬಳಿಯಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಜಿ ಹೊಸಹಳ್ಳಿ ಗ್ರಾಮದ ಲಕ್ಷ್ಮಮ್ಮ ರಮೇಶ್ ಹಾಗೂ ಕಣಚೂರು ಗ್ರಾಮದ ಸುಹಾಸಿನಿ ಗೋಪಾಲ್ ಅವರ ಮನೆಗೆ,

ಚಿಕ್ಕಮಗಳೂರು ತಾಲ್ಲೂಕು ಅಂಬಳೆ ಹೋಬಳಿಯಲ್ಲಿ ಹಾನಿಗೊಳಗಾದ ಅಂಬಳೆ ಗ್ರಾಮದ ರಾಮಯ್ಯ, ವೀರೇಗೌಡ ಹಾಗೂ ಪಾರ್ವತಮ್ಮ ರಂಗೇಗೌಡ ಅವರ ಮನೆಗೆ

ಬಣಕಲ್ ಹೋಬಳಿಯಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಪ್ರೇಮ ವಿಜಯ್ ಹಾಗೂ ಫಲ್ಗುಣಿ ಗ್ರಾಮದ ಸುಮಿತ್ರಾಚಾರಿ

ಆಲ್ದೂರು ಸಂತೆ ಮೈದಾನದಲ್ಲಿ ಹಾನಿಗೊಳಗಾಗಿರುವ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಮನೆ ಕಳೆದುಕೊಂಡವರಿಗೆ ಶೀಘ್ರ ಸೂಕ್ತ ಪರಿಹಾರ ಒದಗಿಸಿಕೊಡಲು ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೇಸ್ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ