chalaka

 

 

ಭವಾನಿ ರೇವಣ್ಣ ಅವರ ಕಾರು ಚಾಲಕನನ್ನು ಎಸ್‌ಐಟಿ ಅಧಿಕಾರಿಗಳು ಚಿಕ್ಕಮಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕ ಅಜಿತ್ ಎಂಬಾತನನ್ನು  ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರಿನ ಕಲ್ಯಾಣ ನಗರದಲ್ಲಿ ವಶಕ್ಕೆ ಪಡೆದಿದ್ದು, ಆತನಿಂದ ಅಗತ್ಯ ಮಾಹಿತಿಯನ್ನು ಅಧಿಕಾರಿಗಳು ಕಲೆಹಾಕುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣ  ಅವರನ್ನು 6 ದಿನಗಳ ಕಾಲ ಎಸ್‌ಐಡಿ ಕಸ್ಟಡಿಗೆ ನೀಡಿದ ಬೆನ್ನಲ್ಲೇ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಹೀಗಾಗಿ ಚಾಲಕನನ್ನು ವಶಕ್ಕೆ ಪಡೆದು ಭವಾನಿ ರೇವಣ್ಣ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಅಜಿತ್  ನಾಲ್ಕೈದು ದಿನದ ಹಿಂದೆ ಚಿಕ್ಕಮಗಳೂರಿನಲ್ಲಿರುವ ತಮ್ಮ ಅತ್ತೆ ಮನೆಗೆ ಬಂದಿದ್ದ ಎನ್ನಲಾಗಿದೆ. ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಅವರ ಬಂಧನಕ್ಕಾಗಿ ಎಸ್‌ಐಟಿ ಮುಂದಾಗಿದೆ. ಹೀಗಾಗಿ ಭವಾನಿ ರೇವಣ್ಣ ಅವರ ಬಗ್ಗೆ ಮಾಹಿತಿ ಕಲೆ ಹಾಕಲು ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಮೇ 4 ರಂದು ಸಂತ್ರಸ್ತೆಯರ ಸ್ಥಳ ಮಹಜರಿನ ವೇಳೆ ಹೊಳೆನರಸೀಪುರ ಮನೆಯಲ್ಲಿ ಭವಾನಿ ಹಾಜರಿದ್ದರು. ಆ ನಂತರ ಮೇ 6 ರಂದು ಹೊಳೆನರಸೀಪುರದ ಮನೆಯಲ್ಲಿ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರನ್ನು ಭೇಟಿಯಾದ ನಂತರ ಹೊಳೆನರಸೀಪುರ ಮನೆಯಿಂದ ಹೋದವರು ಇದುವರೆಗೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಅಜ್ಞಾತದಲ್ಲಿರುವ ಅವರಿಗಾಗಿ ಎಸ್‌ಐಟಿ ಹುಡುಕಾಟ ನಡೆಸುತ್ತಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ