exti 2

 

 

ವಿಶ್ವದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ, ಭಾರತದ  ಲೋಕಸಭೆ ಚುನಾವಣೆಯು ಮುಕ್ತಾಯಗೊಂಡಿದೆ. ಏಳು ಹಂತಗಳಲ್ಲಿ ನಡೆದ ಸುದೀರ್ಘ ಮತದಾನ ಪ್ರಕ್ರಿಯೆ ಮುಗಿದ ಬೆನ್ನಿಗೆಯೇ ಇದೀಗ ವಿವಿಧ ಮಾಧ್ಯಮ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ನಡೆಸಿರುವ ಎಕ್ಸಿಟ್ ಪೋಲ್ ಬಹಿರಂಗವಾಗಿದೆ.

ವಿವಿಧ ಸಂಸ್ಥೆಗಳ ಮತಗಟ್ಟೆ ಸಮೀಕ್ಷೆಯ ವರದಿಗಳು ಲಭ್ಯವಾಗಿವೆ. ಚುನಾವಣೆ ಫಲಿತಾಂಶ ಏನಾಗಬಹುದು? ಯಾವ ಪಕ್ಷಕ್ಕೆ ಹೆಚ್ಚಿನ ಕ್ಷೇತ್ರಗಳು ಸಿಗಬಹುದು? ಯಾರು ದೇಶದ ಪ್ರಧಾನಿಯಾಗಬಹುದು ಎಂಬುದಕ್ಕೆ ಮತಗಟ್ಟೆ ಸಮೀಕ್ಷೆಯು ದಿಕ್ಸೂಚಿಯಾಗಿದೆ. ಬಹುತೇಕ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ದೇಶದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರದ ಮುನ್ಸೂಚನೆ ನೀಡಿವೆ

ಬಿ.ಜೆ.ಪಿ. ನೇತೃತ್ವದ ಎನ್.ಡಿ.ಎ. ಸರ್ಕಾರವೇ ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ಸಮೀಕ್ಷೆಗಳು ಹೇಳಿವೆ. ದೇಶದ ಒಟ್ಟು 545 ಲೋಕಸಭಾ ಕ್ಷೇತ್ರಗಳ ಪೈಕಿ, ಸರಳ ಬಹುಮತಕ್ಕೆ ಯಾವುದೇ ಪಕ್ಷ ಅಥವಾ ಮೈತ್ರಿಕೂಟ ಸರಳ ಬಹುಮತ ಪಡೆಯಲು 273 ಸ್ಥಾನಗಳನ್ನು ಗೆಲ್ಲಬೇಕು.

ಈಗೀನ ಸಮೀಕ್ಷೆಯ ಪ್ರಕಾರ ಬಿ.ಜೆ.ಪಿ . ನೇತೃತ್ವದ NDA ಮೈತ್ರಿಕೂಟ 350-375  ಸ್ಥಾನಗಳನ್ನು, ಕಾಂಗ್ರೇಸ್ ನೇತೃತ್ವದ I.N.D.I.A ಮೈತ್ರಿಕೂಟ 150-160 ಸ್ಥಾನಗಳನ್ನು ಇತರರು 20-30 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಿವೆ.

ಆಸಕ್ತಿದಾಯಕ ಅಂಶವೆಂದರೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿಯೂ ಬಿ.ಜೆ.ಪಿ. ತನ್ನ ಖಾತೆಯನ್ನು ತೆರೆಯುವ ಬಗ್ಗೆ ಸಮೀಕ್ಷೆಗಳು ಮುನ್ಸೂಚನೆ ನೀಡಿವೆ. ಕರ್ನಾಟಕದಲ್ಲಿ ಬಿ.ಜೆ.ಪಿ-ಜೆ.ಡಿ.ಎಸ್. ಮೈತ್ರಿಕೂಟ 20 ರಿಂದ 23 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳಿದ್ದು, ಆಡಳಿತ ಪಕ್ಷ ಕಾಂಗ್ರೇಸ್ ಗೆ ಹಿನ್ನಡೆಯಾಗುವ ಸೂಚನೆ ನೀಡಿವೆ.

ಜೂನ್ 04 ರಂದು ಅಧಿಕೃತವಾಗಿ ಫಲಿತಾಂಶ ಪ್ರಕಟವಾಗಲಿದ್ದು, ಯಾರ ಸಮೀಕ್ಷೆ ನಿಜವಾಗುತ್ತದೆ, ಯಾವ ಮೈತ್ರಿಕೂಟ ದೇಶದ ಚುಕ್ಕಾಣಿ ಹಿಡಿಯಲಿದೆ ಎಂಬುದು ಕುತೂಹಲ ಕೆರಳಿಸಿದೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ