boiler

 

 

ಬಾಯ್ಲರ್ ರಿಪೇರಿ ಮಾಡುವಾಗ ಹೊರ ಬಂದ ಭಾರೀ ಪ್ರಮಾಣದ ಶಾಖದಿಂದ ಕಾರ್ಮಿಕನೋರ್ವ ಸ್ಥಳದಲ್ಲೇ  ಮೃತಪಟ್ಟ ಘಟನೆ ನೆಡೆದಿದೆ
ಚಿಕ್ಕಮಗಳೂರು ನಗರದ ಹೊರವಲಯದ ವಿದ್ಯಾ ಕಾಫಿ ಕ್ಯೂರಿಂಗ್ ನಲ್ಲಿ ಈ ಘಟನೆ ಸಂಭವಿಸಿದ್ದು ಬಾಯ್ಲರ್ ಶಾಖಕ್ಕೆ ಕಾರ್ಮಿಕನ ದೇಹ ಸುಟ್ಟು ಕರಕಲಾಗಿದೆ.
ಚಿಕ್ಕಮಗಳೂರು ಹೊರವಲಯದ ಕುರುಬರಹಳ್ಳಿ ಬಳಿ ಇರುವ ವಿದ್ಯಾ ಕಾಫಿ ಕ್ಯೂರಿಂಗ್ ನಲ್ಲಿ ಕೆಲಸ ಮಾಡುತ್ತಿದ್ದ ಮಡಿಕೇರಿಯ ಕುಶಾಲನಗರ ಮೂಲದ ಯುವಕ ಉದಯ್ (27) ಮೃತಪಟ್ಟಿದ್ದಾನೆ.
ಬಾಯ್ಲರ್ ಸರಿಪಡಿಸುವಾಗ ಏಕಾಏಕಿ ಹೊರ ಬಂದ 340 ಡಿಗ್ರಿ ಶಾಖದ ಫಲವಾಗಿ ಈ ದುರ್ಘಟನೆ ಸಂಭವಿಸಿದೆ. ಶಾಖದ ತೀವ್ರತೆಗೆ ಉದಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಗನನ್ನು ಕಳೆದುಕೊಂಡ ತಾಯಿಯ ಕಣ್ಣೀರು -ದುಃಖ ಹೇಳ ತೀರದಾಗಿದೆ, ಶವಗಾರದ ಬಳಿ ಜಮಾಯಿಸಿದ ಕಾಫಿ ಕ್ಯೂರಿಂಗ್ ಕಾರ್ಮಿಕರು ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದಾರೆ
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಗೆ ಸ್ಪಂದಿಸಿರುವ ಕಾಫಿಕ್ಯೂರಿಂಗ್ ಮಾಲೀಕರು ಮೃತ ಯುವಕನ ಕುಟುಂಬಕ್ಕೆ ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ