badminton

 

 

ಫ್ರೆಂಡ್ಸ್ ಯೂನಿಯನ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ಮೂಡಿಗೆರೆ ಇವರ ಆಶ್ರಯದಲ್ಲಿ ಮೂಡಿಗೆರೆ ಅಡ್ಯಂತಾಯ ರಂಗಮಂದಿರ ಆವರಣದಲ್ಲಿರುವ ಫ್ರೆಂಡ್ಸ್ ಯೂನಿಯನ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ನ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಆಹ್ವಾನಿತ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಆಯೋಜಿಸಲಾಗಿತ್ತು.

ಪಂದ್ಯಾವಳಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಂಡಗಳು ಮತ್ತು ನೆರೆಯ ತೀರ್ಥಹಳ್ಳಿ ತಂಡವೂ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನವನ್ನು ಶೃಂಗೇರಿ ತಂಡ ಗಳಿಸಿಕೊಂಡಿತು

ದ್ವಿತೀಯ ಬಹುಮಾನವನ್ನು ಕುಂದೂರು ತಂಡ, ತೃತೀಯ ಬಹುಮಾನವನ್ನು ಮೈಲಿಮನೆ ತಂಡ ಹಾಗೂ ನಾಲ್ಕನೇ ಬಹುಮಾನವನ್ನು ಮೂಡಿಗೆರೆ ಫ್ರೆಂಡ್ಸ್ ಬಾಲ್ ಬ್ಯಾಡ್ಮಿಂಟನ್ ತಂಡವು ಗಳಿಸಿಕೊಂಡಿತು.

ಇದೇ ಸಂದರ್ಭದಲ್ಲಿ ಕುವೆಂಪು ವಿಶ್ವವಿದ್ಯಾಲಯ ತಂಡವನ್ನು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ್ದ ಶೃಂಗೇರಿ ಜೆಸಿಬಿಎಂ ಕಾಲೇಜಿನ ವಿದ್ಯಾರ್ಥಿಗಳಾದ ಧನುಷ್ ಜಿ.  ಮತ್ತು ಗಗನ್ ಹೆಚ್.ಎಸ್. ಇವರನ್ನು  ಗೌರವಿಸಲಾಯಿತು.

ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಬಾಲ್ ಬ್ಯಾಡ್ಮಿಂಟನ್ ಅಸೋಷಿಯೇಷನ್ ಅಧ್ಯಕ್ಷರಾದ ಡಿ.ಕೆ. ಲಕ್ಷ್ಮಣಗೌಡ ಮತ್ತು ಕಾರ್ಯದರ್ಶಿ ಹೆಚ್.ಕೆ. ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಬಾಲ್ ಬ್ಯಾಡ್ಮಿಂಟನ್ ಅಸೋಷಿಯೇಷನ್ ಅಧ್ಯಕ್ಷ ಡಿ.ಕೆ. ಲಕ್ಷ್ಮಣಗೌಡ, ಜಿಲ್ಲಾ ಕಾರ್ಯದರ್ಶಿ ಹೆಚ್.ಕೆ. ಶಿವಕುಮಾರ್, ಮೂಡಿಗೆರೆ ಫ್ರೆಂಡ್ಸ್ ಯೂನಿಯನ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ಅಧ್ಯಕ್ಷ ಕೆ.ಜೆ. ಪ್ರಸನ್ನ, ಕಾರ್ಯದರ್ಶಿ ಶಂಕರ್ ಹಾಗೂ ಕ್ಲಬ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ