ctr yathindra

 

 

ರಾಜ್ಯ ವಿಧಾನಪರಿಷತ್ ಗೆ ಕಾಂಗ್ರೆಸ್ 7, ಬಿಜೆಪಿ 3, ಜೆಡಿಎಸ್ 1 ಸೇರಿ ಒಟ್ಟು 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನಸಭೆಯಲ್ಲಿ ಈಗಿರುವ ಸಂಖ್ಯಾಬಲದ ಪ್ರಕಾರ, ಕಾಂಗ್ರೆಸ್ 7 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದ್ದರೆ, ಬಿಜೆಪಿ 3 ಹಾಗೂ ಜೆಡಿಎಸ್ 1 ಸ್ಥಾನ ಗೆಲ್ಲುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ, ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷೆ ಬಿಲ್ಕಿಸ್ ಬಾನೊ, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಸಲಹೆಗಾರ ಕೆ.ಗೋವಿಂದರಾಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್, ಮಾಜಿ ಎಂಎಲ್ಸಿ ಐವನ್ ಡಿಸೋಜಾ, ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಅವರು ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದಾರೆ.

ಇನ್ನು ಬಿಜೆಪಿಯು ಪಕ್ಷದ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಕ್ಷೇತ್ರದ ಮಾಜಿ ಶಾಸಕ ಸಿ ಟಿ ರವಿ, ಎಂಎಲ್‌ಸಿ ಮತ್ತು ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಮತ್ತು ಪಕ್ಷದ ನಾಯಕ ಎಂ ಜಿ ಮುಳೆ ಹಾಗೂ ಜೆಡಿಎಸ್ ನ ಟಿ ಎನ್ ಜವರಾಯಿ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಘೋಷಿಸಿದ್ದಾರೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ