harish pu college

 

 

ಇತ್ತೀಚೆಗೆ ಪ್ರಕಟವಾದ ನೀಟ್ ಪರೀಕ್ಷೆ ಫಲಿತಾಂಶದಲ್ಲಿ  ಮೂಡಿಗೆರೆ ಹರೀಶ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ಸುಖೇಶ್ ಉತ್ತಮ ಸಾಧನೆ ತೋರಿದ್ದಾರೆ.

ಸುಖೇಶ್ ರಾಷ್ಟ್ರಮಟ್ಟದ ನೀಟ್ (NEET) ಪರೀಕ್ಷೆಯಲ್ಲಿ 720ಕ್ಕೆ 589 ಅಂಕಗಳನ್ನು ಗಳಿಸಿ ಉನ್ನತವಾದ ಸಾಧನೆ ಮಾಡಿರುತ್ತಾರೆ.

ಸುಖೇಶ್ ಮಂಡ್ಯ ಜಿಲ್ಲೆ ಚನ್ನಪಟ್ಟಣದ ಸ್ವಾಮಿಗೌಡ ಶೋಭಾ ಅವರ ಪುತ್ರನಾಗಿದ್ದು, ಹರೀಶ್ ಪಿ.ಯು. ಕಾಲೇಜಿನಲ್ಲಿ 2023-24 ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ. ಪೂರ್ಣಗೊಳಿಸಿದ್ದಾರೆ.

ವಿದ್ಯಾರ್ಥಿಯ ಸಾಧನೆಗೆ ಕಾಲೇಜು ಆಡಳಿತ ಮಂಡಳಿ ಅಭಿನಂದನೆ ಸಲ್ಲಸಿದ್ದು, ಪ್ರೋತ್ಸಾಹ ಧನವಾಗಿ 25 ಸಾವಿರ ಹಣವನ್ನು ನೀಡಿರುತ್ತಾರೆ.

ಕಾಲೇಜಿನ ಅಧ್ಯಕ್ಷರಾದ ಹರೀಶ್ ಅವರು ವಿದ್ಯಾರ್ಥಿಗೆ ಪ್ರೋತ್ಸಾಹಧನದ ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ ; ಹರೀಶ್ ಪಿ.ಯು.ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅತ್ಯುನ್ನತ ಮಟ್ಟದ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ದ್ಯೇಯದೊಂದಿಗೆ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ನಮ್ಮ ಕಾಲೇಜಿನ ಅನೇಕ ವಿದ್ಯಾರ್ಥಿಗಳು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉನ್ನತ ಸಾಧನೆ ತೋರುತ್ತಿದ್ದಾರೆ, ಅಂತಹ ವಿದ್ಯಾರ್ಥಿಗಳಿಗೆ ಸಂಸ್ಥೆಯಿದ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುತ್ತದೆ ಎಂದರು.

 

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ