ashvathama

 

 

ಕರ್ನಾಟಕದ ದಸರಾ ಆನೆ ಅರ್ಜುನ ಸಾವಿನ ಆಘಾತದ ಬೆನ್ನಲ್ಲೇ ಮತ್ತೊಂದು ದಸರಾ ಆನೆ ಅಶ್ವತ್ಥಾಮ ವಿದ್ಯುತ್ ತಗುಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಎರಡು ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ 38 ವರ್ಷದ ‘ಅಶ್ವತ್ಥಾಮ’ ಆನೆಯು ಮೈಸೂರಿನಲ್ಲಿ ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಮಂಗಳವಾರ ಮೃತಪಟ್ಟಿದೆ.

ಅರಣ್ಯ ಇಲಾಖೆ ಮೂಲಗಳ ಪ್ರಕಾರ ಮೈಸೂರು ಜಿಲ್ಲೆಯ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಆನೆಯು ಆಹಾರ ಅರಸಿ ಕಾಡಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ ಅಶ್ವತ್ಥಾಮ ಮೃತಪಟ್ಟಿದೆ ಎಂದು ‌ ಹೇಳಲಾಗಿದೆ.

2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಈ ಅಶ್ವತ್ಥಾಮ ಆನೆಯನ್ನು ಸೆರೆ ಹಿಡಿಯಲಾಗಿತ್ತು. ಶಾಂತ ಹಾಗೂ ಗಾಂಭೀರ್ಯ ಸ್ವಭಾವಕ್ಕೆ ಹೆಸರಾಗಿದ್ದ ಅದನ್ನು 2021ರ ದಸರೆಗೆ ಕರೆತರಲಾಗಿತ್ತು. ಅದಕ್ಕೆ ನಡಿಗೆ ತಾಲೀಮು ಸೇರಿದಂತೆ ವಿವಿಧ ತಾಲೀಮನ್ನು ನೀಡಲಾಗಿತ್ತು.‌ 2022ರ ದಸರೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿತ್ತು. ಇದೀಗ ಆಶ್ವತ್ಥಾಮ ದುರಂತ ಅಂತ್ಯ ಕಂಡಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ