ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶಾಮ್ ಭಟ್, ಸದಸ್ಯರಾದ ಎಸ್.ಕೆ. ವಂಟಿಗೋಟಿ ಜೂನ್ 27, 28 ರಂದು ಚಿಕ್ಕಮಗಳೂರಿಗೆ ಭೇಟಿ ನೀಡಲಿದ್ದಾರೆ .
ಜೂನ್ 27 ರಂದು ಮಧ್ಯಾಹ್ನ 4.30 ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಿ ಅಂದು ಸಂಜೆ 5.30 ರಿಂದ ರಾತ್ರಿ 7 ಗಂಟೆಯ ವರೆಗೆ ಜಿ.ಪಂ.ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳ ವಿಚಾರಣೆ ನಡೆಸಿ ಅಂದು ಚಿಕ್ಕಮಗಳೂರಿನಲ್ಲಿ ವಾಸ್ತವ್ಯ ಮಾಡುವರು.
ಜೂನ್ 28 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿ.ಪಂ.ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳ ವಿಚಾರಣೆ ನಡೆಸಿ ಇತ್ಯರ್ಥಪಡಿಸುವರು.
ಅಹವಾಲು ಸ್ವೀಕಾರ: ಈ ಎರಡೂ ದಿನಗಳಂದು ಅಹವಾಲು ಸ್ವೀಕರಿಸಲಿದ್ದು, ಅಧ್ಯಕ್ಷ/ ಸದಸ್ಯರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಬಹುದಾಗಿದೆ.



