ಹಿರಿಯ ಪತ್ರಕರ್ತ ಸುಂದರಬಂಗೇರ (71) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿಳಗುಳ ವಾಸಿಯಾಗಿದ್ದ ಸುಂದರಬಂಗೇರ ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಮೂಡಿಗೆರೆಯಲ್ಲಿ ಟೈಲರ್ ವೃತ್ತಿ ಮಾಡುತಿದ್ದ ಇವರು ನಂತರ ಪತ್ರಿಕಾರಂಗಕ್ಕೆ ಕಾಲಿಟ್ಟು ತನ್ನ ಸಂಪಾದಕತ್ವದಲ್ಲಿ ಹದ್ದಿನ ಕಣ್ಣು ಆ ನಂತರ ಈಗಲ್ ಎಂದ ಪತ್ರಿಕೆಯನ್ನು ಪ್ರಕಟಿಸುತ್ತಿದ್ದರು.
ಸುಂದರ ಬಂಗೇರ ಸಾಹಿತ್ಯ ಕ್ಷೇತ್ರದಲ್ಲಿಗುರುತಿಸಿಕೊಂಡಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಕ್ರೀಯರಾಗಿ ಸೇವೆ ಸಲ್ಲಿಸಿದ್ದರು. ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಎರಡು ಬಾರಿ ಸ್ಪರ್ಧಿಸಿದ್ದರು.
ಬಂಗೇರ ಅವರ ನಿಧನಕ್ಕೆ ಜಿಲ್ಲಾ ಪತ್ರಕರ್ತರ ಸಂಘ, ತಾಲ್ಲೂಕು ಪತ್ರಕರ್ತರ ಸಂಘ, ಕ.ಸಾ.ಪ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳು ಸಂತಾಪ ವ್ಯಕ್ತಪಡಿಸಿವೆ.
ಬಿಳಗುಳದ ಅವರ ನಿವಾಸದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು, ಅಂತಿಮ ಸಂಸ್ಕಾರ ಇಂದು ಸಂಜೆ ಮೂಡಿಗೆರೆಯ ಬೀಜುವಳ್ಳಿ ರೋಟರಿ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.



