crime

 

 

ವ್ಯಕ್ತಿಯೋರ್ವ ಕೌಟುಂಬಿಕ ಕಲಹವಾದ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ಗುಂಡು ಹಾರಿಸಿ  ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನ ದೊಡ್ಡಮಲಸವಾರದಲ್ಲಿ ನಡೆದಿದೆ.

ದೊಡ್ಡಮಲಸಾವರ ಗ್ರಾಮದ ಜಾಜಿ (45) ಹತ್ಯೆಗೀಡಾದ ಮಹಿಳೆ,   ಹರೀಶ್ ಪೂಜಾರಿ (50) ಎಂದು ಗುರುತಿಸಲಾದ ವ್ಯಕ್ತಿ ತನ್ನ ಹೆಂಡತಿಯೊಂದಿಗೆ ಜಗಳ ತೆಗೆದು ನಂತರ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ. ನಂತರ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆರೋಪಿ ಹರೀಶ್ ಪೂಜಾರಿ ಕೂಲಿ ಕಾರ್ಮಿಕನಾಗಿದ್ದು, ತನ್ನ ಪತ್ನಿಯೊಂದಿಗೆ ನಿತ್ಯ ಜಗಳ ಮಾಡುತ್ತಿದ್ದು, ಹಲವು ಬಾರಿ ಅಕ್ಕಪಕ್ಕದ ಮನೆಯವರು ಸಮಾಧಾನಪಡಿಸಲು ಯತ್ನಿಸಿದ್ದರು. ಇವರಿಬ್ಬರಿಗೆ ವಸತಿ ಶಾಲೆಗಳಲ್ಲಿ ಓದುತ್ತಿರುವ ಮೂವರು ಮಕ್ಕಳಿದ್ದಾರೆ. ಸ್ಥಳಕ್ಕೆ ಅರೇಹಳ್ಳಿ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿದ್ಧಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ