crime

 

 

ಸುಮಾರು 55 ವರ್ಷದ ಮಹಿಳೆಯೋರ್ವರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಮೂಡಿಗೆರೆ ಪಟ್ಟಣದ ಬಸ್ ಸ್ಟ್ಯಾಂಡ್ ಸಮೀಪದ ಜೂನಿಯರ್ ಕಾಲೇಜು ಆವರಣದಲ್ಲಿ ಶನಿವಾರ ಬೆಳಗ್ಗೆ ಬಯಲಿಗೆ ಬಂದಿದೆ.

ಮೃತ ಮಹಿಳೆ ಬಿಳಗುಳ ಗ್ರಾಮದ ಕಲ್ಯಾಣಿ ಎಂದು ಹೇಳಲಾಗುತ್ತಿದೆ. ಈ ಮಹಿಳೆ ಅನೇಕ ವರ್ಷಗಳಿಂದ ಪಟ್ಟಣದಲ್ಲಿ ಬಿಕ್ಷೆ ಬೇಡಿಕೊಂಡು ತಿರುಗಾಡುತ್ತಿದ್ದರೆನ್ನಲಾಗಿದೆ.

ಶನಿವಾರ ಬೆಳಗ್ಗೆ ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ಮೈಮೇಲೆ ಬಟ್ಟೆಯಿಲ್ಲದೇ ಅರೆನಗ್ನ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಅಲ್ಲದೇ ಮೈಮೇಲೆ ಗಾಯಗಳಾಗಿದ್ದು, ಪಕ್ಕದಲ್ಲಿಯೇ ರಕ್ತ ಹರಿದಿರುವುದು ಕಂಡು ಬಂದಿದ್ದು, ಯಾರೋ ದುಷ್ಕರ್ಮಿಗಳು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಘಟನೆ ಸ್ಥಳಕ್ಕೆ ಎಸ್‍ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ಸ್ವಯಂಸೇವಕರ ನೆರವಿನಿಂದ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.

ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ