ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಸಮೀಪದಲ್ಲಿ ಗಾಳಿ ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರವೊಂದು ಮಂಗಳವಾರ ಬೆಳಗ್ಗೆ ಬಿದಿದ್ದು, ಸುಮಾರು 4 ಗಂಟೆ ವಾಹನ ಸಂಚಾರಕ್ಕೆ ತೊಡಕುಂಟಾಯಿತು.
ಬೃಹತ್ ಮರ ವಿದ್ಯುತ್ ಲೈನಿನ ಮೇಲೂ ಬಿದ್ದಿದ್ದರಿಂದ ವಿದ್ಯುತ್ ವ್ಯತ್ಯಯವು ಉಂಟಾಗಿತ್ತು.
ಕೂಡಲೇ ಮೂಡಿಗೆರೆ ಶೌರ್ಯ ವಿಪತ್ತು ನಿರ್ವಹಣ ತಂಡ, ಅರಣ್ಯ ಹಾಗೂ ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮರವನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ವಿದ್ಯುತ್ ಲೈನ್ ಸರಿಪಡಿಸಿ ವಿದ್ಯುತ್ ಸಂಪರ್ಕ ಮರುಸ್ಥಾಪನೆಗೆ ಕ್ರಮ ವಹಿಸಲಾಗಿದೆ.
ಕಾರ್ಯಚರಣೆಯಲ್ಲಿ ಶೌರ್ಯ ವಿಪತ್ತು ತಂಡದ ಮಾಸ್ಟರ್ ಪ್ರವೀಣ್ ಪೂಜಾರಿ, ಕಿಶೋರ್, ಗೀತಾ ಹಾಗೂ ಮೆಸ್ಕಾಂ , ಅರಣ್ಯ ಸಿಬ್ಬಂದಿ ಮೆಸ್ಕಾಂ ಸಿಬ್ಬಂದಿ ಭಾಗವಹಿಸಿದ್ದರು.



