IMG-20240702-WA0497

 

 

ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದು ಹೋಗಿದ್ದ ವಾಹನವನ್ನು ಪತ್ತೆ ಹಚ್ಚಿ ಕರ್ನಾಟಕ ಪೊಲೀಸ್ ಆಕ್ಟ್ ಪ್ರಕಾರ ಕೇಸು ದಾಖಲಿಸಿದ ಪ್ರಕರಣ ನಡೆದಿದೆ.

ಚಾರ್ಮಾಡಿ ಘಾಟಿಯಲ್ಲಿ ಗಸ್ತು ತಿರುಗುತ್ತಿದ್ದ ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಚರ್ ಡಿ.ವಿ ರೇಣುಕಾ ಮಾತನಾಡಿ’ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಹಾಸನ ಮೂಲದ ಎಳೆನೀರು ವಾಹನದ ಚಾಲಕ ವಾಹನದಲ್ಲಿದ್ದ ಕಸವನ್ನು ಘಾಟಿಯಲ್ಲಿ ಬಿಸಾಕಿ ಮಂಗಳೂರು ಭಾಗದಿಂದ ಕೊಟ್ಟಿಗೆಹಾರ ಕಡೆಗೆ  ತೆರಳಿದ್ದ. ಅದರ ಜಾಡು ಹಿಡಿದು ಚಾರ್ಮಾಡಿ ಘಾಟಿಗೆ ಗಸ್ತಿನಲ್ಲಿದ್ದ  ಪಿಎಸ್ ಐ ವಾಹನವನ್ನು ಗೇಟ್ ನಲ್ಲಿ ಹಿಡಿದು ವಾಪಾಸ್ ಕರೆ ತಂದು ಅದೇ ಕಸವನ್ನು ತುಂಬಿಸಿ ಚಾಲಕನಿಗೆ ಬಣಕಲ್ ಠಾಣೆಯಲ್ಲಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿ ದಂಡ ವಿಧಿಸಿ ಕಸವನ್ನು ಅಲ್ಲಿಂದ ಅವರಿಂದಲೇ ತೆರವು ಗೊಳಿಸಿದ್ದಾರೆ.

ಚಾಲಕನಿಗೆ ತಾನು ಮಾಡಿದ ತಪ್ಪಿನ ಅರಿವು ಮೂಡಿಸಿದ ಪೊಲೀಸರು ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಇದರಿಂದ ಇತರ ವಾಹನದವರು ಈ ರೀತಿ ಮಾಡದಂತೆ ಜಾಗೃತಿ ಮೂಡಿಸಿದ  ಪೊಲೀಸರ ಕ್ರಮವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ