ಮೂಡಿಗೆರೆ ಬಸ್ ಸ್ಟ್ಯಾಂಡ್ ಸಮೀಪದ ಪ್ರೌಢಶಾಲಾ ಆವರಣದಲ್ಲಿ ಮಹಿಳೆಯೊಬ್ಬರನ್ನು ಅತ್ಯಾಚಾರವೆಸಗಿ ಕೊ ಲೆಗೈದಿರುವ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಭೀಮಾ ಕೊರೆ ಗಾಂವ್ ಆಚರಣಾ ಸಮಿತಿ ಮುಖಂಡರುಗಳು ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು.
ಈ ಸಂಬಂಧ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮೇಗೌಡ ಅವರಿಗೆ ಮನವಿ ಸಲ್ಲಿಸಿದ ಸಮಿತಿ ಮುಖಂಡರು ಅನಾತ ಮಹಿಳೆ ಕಲ್ಯಾಣಮ್ಮನವರ ಸಾವಿಗೆ ಕಾರಣರಾದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಬಳಿಕ ಮಾತನಾಡಿದ ಸಮಿತಿ ಅಧ್ಯಕ್ಷ ಸುಂದ್ರೇಶ್ ಕನ್ನಾಪುರ ಮೂಡಿಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕಲ್ಯಾಣಮ್ಮ ಎಂಬ ಮಹಿಳೆಯ ಶವ ಸಾರ್ವಜನಿಕರಿಗೆ ಕಂಡುಬಂದ ಹಿನ್ನೆಲೆ ಪೊಲೀಸ್ ಇಲಾಖೆ ಮಾಹಿತಿ ನೀಡಲಾಯಿತು. ತದನಂತರ ಮಹಿಳೆಯ ಶವ ಗಮನಿಸಿದಾಗ ಅತ್ಯಾಚಾರವೆ ಸಗಿ ಕೊಲೆಗೈದಿದೆ ಎಂಬ ಬಗ್ಗೆ ಚರ್ಚೆಯಾಗುತ್ತಿದೆ ಎಂದರು.
ಈ ಮಹಿಳೆಯು ಅನಾಥೆ ಎಂದು ಸ್ಥಳೀಯವಾಗಿ ತಿಳಿದಿದೆ. ಹೀಗಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ನಿಜವಾದ ಆರೋಪಿಗಳನ್ನು ಬಂಧಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಮಿತಿ ಕಾರ್ಯದರ್ಶಿ ಸುಂದ್ರೇಶ್ ಹೊಯ್ಸಳಲು ಮಾತನಾಡಿ ಇಂಥ ಹೀನಾ ಪ್ರಕರಣದಿಂದ ಮಲೆನಾಡು ಹಾಗೂ ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿರುವ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವತಿಯರ ವಿದ್ಯಾಭ್ಯಾಸಕ್ಕೆ ಹಾಗೂ ಉದ್ಯೋಗಕ್ಕೆ ತೆರಳುವ ಮಹಿಳೆಯರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ, ಆದ್ದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕು. ಅಲ್ಲದೇ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ಸೂಕ್ತ ಭದ್ರತೆ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಮಿತಿ ಸದಸ್ಯರುಗಳಾದ ಹರೀಶ್ ಕೆಲ್ಲೂರು, ಭಾನುಪ್ರಕಾಶ್ ಹೆಸ್ಗಲ್, ಪೂರ್ಣೇಶ್ ಬೆಟ್ಟದಮನೆ, ಮಂಜುನಾಥ್ ಚಕ್ಕುಡಿಗೆ, ವಿಶ್ವನಾಥ್.ಕೃಷ್ಣಪ್ಪನಗರ, ಅಶೋಕ ಮಾಕೋನಹಳ್ಳಿ, ಸತೀಶ್ ಮಾಕೋನಹಳ್ಳಿ, ಇಂದ್ರೇಶ್ ಜೈನುಬೈಲ್, ಮಲ್ಲೇಶ್ ಹೊಸಳ್ಳಿ ಮತ್ತಿತರರಿದ್ದರು.
ಮೂಡಿಗೆರೆ ಪಟ್ಟಣದಲ್ಲಿ ಒಂಟಿ ಮಹಿಳೆ ಕೊಲೆ ಪ್ರಕರಣ : ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ



