wild-elephant

ಸಾಂದರ್ಭಿಕ ಚಿತ್ರ

 

 

ಕಾಡಾನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.  ಕೊಡಗು ಜಿಲ್ಲೆ ಗೋಣಿಕೊಪ್ಪಲು ದೇವರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಪದ ದೇವರಕಾಡು ಪೈಸಾರಿಯಲ್ಲಿ ದುರ್ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಗೌರಿ (65) ಎಂದು ಗುರುತಿಸಲಾಗಿದೆ.  ಮಂಗಳವಾರ ಸಂಜೆ ಎಂದಿನಂತೆ ಕೂಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ.

ವಿಷಯ ತಿಳಿದ ನಾಗರಿಕರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಸ್ಥಳಕ್ಕೆ ತಿತಿಮತಿ ಎಸಿಎಫ್ ಗೋಪಾಲ್, ಆರ್‌ಎಫ್‍ಓ ಗಂಗಾಧರ್ ಸೇರಿದಂತೆ ಸಿಬ್ಬಂದಿಗಳು ಹಾಗೂ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಕಾರ್ಯದರ್ಶಿ ಎ.ಜೆ.ಬಾಬು, ದೇವಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಬಸಂತ್ ಕುಮಾರ್, ತಿತಿಮತಿ ಗ್ರಾ.ಪಂ ಸದಸ್ಯ ಅಪ್ರೋಸ್ ಭೇಟಿ ನೀಡಿ ಪರಿಶೀಲಿಸಿದರು. ಘಟನೆಯ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತದೇಹವನ್ನು ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ