pepper theft

 

 

ಚಿಕ್ಕಮಗಳೂರು ತಾಲ್ಲೂಕು ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಸಗಲಿ ಗ್ರಾಮದಲ್ಲಿ ಕಾಳುಮೆಣಸು ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಸಗಲಿ ಗ್ರಾಮದ ದೇವರಾಜ್ ಗೌಡ ಅವರ ಕಾಫಿ ಗೋಡಾನ್ ನಿಂದ ಸುಮಾರು 720 ಕೆ.ಜಿ. ಕಾಳುಮೆಣಸು ಕಳ್ಳತನವಾಗಿತ್ತು. ಈ ಬಗ್ಗೆ ಅವರು ಮಲ್ಲಂದೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕಾಳುಮೆಣಸು ಕಳ್ಳತನ ಮಾಡಿದ್ದ ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ. ಚಿಕ್ಕಮಗಳೂರು ಇಂದಿರಾಗಾಂಧಿ ಬಡಾವಣೆ ನಿವಾಸಿ ಲೋಹಿತ್ ಎಂಬಾತನನ್ನು ಬಂಧಿಸಿದ್ದು, ಆತನಿಂದ 4 ಲಕ್ಷಕ್ಕೂ ಅಧಿಕ ಮೌಲ್ಯದ 646 ಕೆ.ಜಿ. ಕಾಳುಮೆಣಸು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಆರೋಪಿ ಬಳಿ ಇದ್ದ ಕಾರು ಮತ್ತು ಬೈಕ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ವೃತ್ತ ನಿರೀಕ್ಷಕ ಸತ್ಯನಾರಾಯಣ, ಪಿಎಸೈ ಗುರು ಎ. ಸಜ್ಜನ್, ಸಿಬ್ಬಂದಿ ಭರತ್ ಭೂಷಣ್, ಕುದರಾಳ್ ಕರಿಯಪ್ಪ, ಚಿದಾನಂದ, ನವೀನ್ ಮಂಡೆಗಾರ್, ನಿಂಗರಾಜ್, ದರ್ಶನ್, ಸಾಗರ್, ನವೀನ್, ತೀರ್ಥೇಶ್, ಅಶೋಕ್, ನಟರಾಜ್ ಭಾಗವಹಿಸಿದ್ದರು.

ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹೆಚ್ಚುವರಿ ಪೊಲೀಸ್ ಅದಿಕ್ಷಕ ಕೃಷ್ಣಮೂರ್ತಿ ಅಭಿನಂದಿಸಿದ್ದಾರೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ