IMG_20240715_195204_copy_400x490

ಮೂಡಿಗೆರೆ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಯು.ಜಯರಾಂಗೌಡ (67 ವರ್ಷ) ನಿಧನಹೊಂದಿದ್ದಾರೆ.

ಮೂಡಿಗೆರೆ ತಾಲ್ಲೂಕು, ಕಸಬಾ ಹೋಬಳಿ, ಕೆಸವಳಲು ಗ್ರಾಮದ ವಾಸಿ, ಕಾಫಿ ಬೆಳೆಗಾರರಾಗಿದ್ದ ಜಯರಾಂಗೌಡ ಒಂದು ಅವಧಿಗೆ ಕಾಂಗ್ರೆಸ್ ಪಕ್ಷದಿಂದ ದಾರದಹಳ್ಳಿ ಕ್ಷೇತ್ರದಿಂದ ಮೂಡಿಗೆರೆ ತಾಲ್ಲೂಕು ಪಂಚಾಯತಿ ಸದಸ್ಯರಾಗಿ ಅದೇ ಅವಧಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಜಯರಾಂಗೌಡ ಚಿಕಿತ್ಸೆ ಫಲಕಾರಿಯಾಗದೇ ಈ ದಿನ ಸಂಜೆ 6.00ಗಂಟೆಗೆ ವಿಧಿವಶರಾಗಿದ್ದಾರೆ. ನಾಳೆ ಮಂಗಳವಾರ ಮದ್ಯಾಹ್ನ 2.00ಗಂಟೆಗೆ ಅಂತಿಮ ಸಂಸ್ಕಾರ ಕೆಸವಳಲಿನಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಜಯರಾಂಗೌಡ ಅವರು ದಾರದಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ, ವಿಎಸ್ಎಸ್ಎನ್ ಅಧ್ಯಕ್ಷರಾಗಿ, ಟಿ.ಎಪಿಸಿಎಂಎಸ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಸಹೋದರರು. ಸಹೋದರಿ. ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ