raining2

 

 

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು ಜಿಲ್ಲಾಡಳಿತ ಮುಂಜಾಗ್ರತ ಕ್ರಮವಾಗಿ ಶುಕ್ರವಾರವು ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ಆರ್ ಪುರ ಮತ್ತು ಕಳಸ ತಾಲೂಕುಗಳಲ್ಲಿ ಸಂಪೂರ್ಣ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು ಚಿಕ್ಕಮಗಳೂರು ತಾಲೂಕಿನ ನಗರಸಭೆ, ಲಕ್ಯಾ ಮತ್ತು ಅಂಬಳೆ ಹೋಬಳಿಗಳನ್ನು ಹೊರತುಪಡಿಸಿ ಉಳಿದ ಹೋಬಳಿಗಳ ವ್ಯಾಪ್ತಿಯ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಕಳೆದ ಒಂದು ವಾರದಿಂದ ಮಲೆನಾಡು ಭಾಗದಲ್ಲಿ ಸತತ ಮಳೆಯಾಗುತ್ತಿದ್ದು ಗುರುವಾರವು ಜಿಲ್ಲೆಯ ಆರು ತಾಲೂಕುಗಳಲ್ಲಿ ರಜೆ ಘೋಷಣೆ ಮಾಡಲಾಗಿತ್ತು.

ಮಳೆ ಮತ್ತು ಗಾಳಿ ರಭಸವಾಗಿ ಮುಂದುವರೆಯುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶುಕ್ರವಾರ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆವರೆಗೆ ರಜೆ ಘೋಷಣೆ ಮಾಡಲಾಗಿದೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ