kodagu2

 

 

ಪತ್ನಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಶನಿವಾರ ಈ ದುರ್ಘಟನೆ ನಡೆದಿದೆ.

ವಿರಾಜಪೇಟೆಯ ಹೊರವಲಯದ ಬೇಟೋಳಿ ಎಂಬಲ್ಲಿ ಈ ಘಟನೆ ನಡೆದಿದ್ದು, ಶಿಲ್ಪ (36ವರ್ಷ) ಎಂಬುವವರನ್ನು ಆಕೆಯ ಗಂಡ  ನಾಯಕಂಡ ಬೋಪಣ್ಣ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.  ಪತ್ನಿಯನ್ನು ಗುಂಡುಹೊಡೆದು ಕೊಲೆ ಮಾಡಿದ ಬೋಪಣ್ಣ ಕೋವಿಯೊಂದಿಗೆ ವಿರಾಟಪೇಟೆ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.

ಶನಿವಾರ ಬೆಳಿಗ್ಗೆ ಗಂಡ ಹೆಂಡತಿ ನಡುವೆ ಜಗಳವಾಗಿದ್ದು, ಜಗಳ ವಿಕೋಪಕ್ಕೆ ತಿರುಗಿ ಪತಿ ಪತ್ನಿಗೆ ಗುಂಡು ಹೊಡೆದು ಸಾಯಿಸಿದ್ದಾರೆ. ಮೃತ ಶಿಲ್ಪ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯೆಯಾಗಿಯೂ ಕಾರ್ಯನಿರ್ವಹಿಸಿದ್ದರು ಎನ್ನಲಾಗಿದೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ