dc meena nagraj

ಜಿಲ್ಲಾಧಿಕಾರಿ ಮೀನಾ ನಾಗರಾಜ್

 

 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು ಜಿಲ್ಲಾಡಳಿತ ಮುಂಜಾಗ್ರತ ಕ್ರಮವಾಗಿ ಶುಕ್ರವಾರವು (ಜುಲೈ 26) ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ಆರ್ ಪುರ, ಚಿಕ್ಕಮಗಳೂರು ಮತ್ತು ಕಳಸ ತಾಲೂಕುಗಳಲ್ಲಿ ಸಂಪೂರ್ಣ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ  ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಕಳೆದ ಒಂದು ತಿಂಗಳಿಂದ ಮಲೆನಾಡು ಭಾಗದಲ್ಲಿ ಎಡಬಿಡದೇ ಮಳೆಯಾಗುತ್ತಿದ್ದು ಗುರುವಾರವು ಜಿಲ್ಲೆಯ ಆರು ತಾಲೂಕುಗಳಲ್ಲಿ ರಜೆ ಘೋಷಣೆ ಮಾಡಲಾಗಿತ್ತು.

ಮಳೆ ಮತ್ತು ಗಾಳಿ ರಭಸವಾಗಿ ಮುಂದುವರೆಯುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 26 ರಂದು ಶುಕ್ರವಾರ ಒಂದು ದಿನಕ್ಕೆ ಅನ್ವಯವಾಗುವಂತೆ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆವರೆಗೆ ರಜೆ ಘೋಷಣೆ ಮಾಡಲಾಗಿದೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ