rajanees

 

 

ಕರ್ನಾಟಕ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಜುಲೈ 31 ರಂದು ನಿವೃತ್ತಿಯಾಗುತ್ತಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ಅವರ ಪತ್ನಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್​ರನ್ನು ನೇಮಕ ಮಾಡಲು ಒಪ್ಪಿಗೆ ನೀಡಲಾಗಿತ್ತು.

1989ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಶಾಲಿನಿ ರಜನೀಶ್ ಅವರು 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ