ayyar

 

 

ಚಿಕ್ಕಮಗಳೂರು ಜಿಲ್ಲೆಯ ಹಿರಿಯ ಪತ್ರಕರ್ತರಾಗಿದ್ದ, ಬಸವನಹಳ್ಳಿ ನಿವಾಸಿ ಚೂಡಾನಾಥ ಐಯ್ಯರ್ (78)  ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು, ಒಬ್ಬಳು ಪುತ್ರಿ ಹಾಗೂ ಅಪಾರ ಸ್ನೇಹಿತರನ್ನು ಅಗಲಿರುತ್ತಾರೆ.

ಹೊಸದಿಗಂತ ಎಂಬ ಸ್ಥಳೀಯ ದಿನಪತ್ರಿಕೆ ಸಂಪಾದಕರಾಗಿ ಜನ ಜನಮನ್ನಣೆ ಗಳಿಸಿದ್ದ ಅವರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಹಿರೇಮೆಗಳಿಗೆ ಪಾತ್ರರಾಗಿದ್ದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಾಜ್ಯ ಸಣ್ಣ ಪತ್ರಿಕೆಗಳ ಸಂಪಾದಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಮತ್ತು ವಿವಿಧ ಸಂಘ ಸಂಸ್ಥೆಗಳ ಒಡನಾಡಿಯಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಪತ್ರಿಕಾ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಅವರಿಗೆ ಸಂದಿವೆ. ಪತ್ರಿಕಾ ಮಾನ್ಯತಾ ಸಮಿತಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.

ನೇರ ನಡೆನುಡಿಯಿಂದ ಹೆಸರು ಮಾಡಿದ್ದ ಚೂಡನಾಥ ಅಯ್ಯರ್ ಅವರು ಉತ್ತಮ ವಾಗ್ಮಿಗಳಾಗಿದ್ದರು. ಜಿಲ್ಲೆಯ ಹಿರಿಯ ಪತ್ರಕರ್ತರ ಸಾಲಿನಲ್ಲಿ ಇವರು ಪ್ರಮುಖವಾಗಿ ಗುರುತಿಸಿಕೊಂಡಿದ್ದರು. ತಮ್ಮದೇ ಆದ ಸ್ವಂತ ಪ್ರಿಂಟಿಂಗ್ ಘಟಕವನ್ನು ಪ್ರಾರಂಭಿಸಿದ್ದರು.

ಚೂಡನಾಥ ಅಯ್ಯರ್ ಅವರ ನಿಧನಕ್ಕೆ ಜಿಲ್ಲೆಯ ಪತ್ರಕರ್ತರು, ಜನಪ್ರತಿನಿಧಿಗಳು ಮತ್ತು ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ತಮ್ಮ ಸಂತಾಪ ಸೂಚಿಸಿದ್ದಾರೆ.

ಅವರ ಅಂತಿಮ ಸಂಸ್ಕಾರ ಇಂದು ಚಿಕ್ಕಮಗಳೂರು ಉಪ್ಪಳ್ಳಿ ಸಾರ್ವಜನಿಕ ಚಿತಾಗಾರದಲ್ಲಿ ನೆರವೇರಲಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ