prasanna saldana

ಕಬ್ಬಿಣದ ಏಣಿಯನ್ನ ಕೊಂಡೊಯ್ಯುವಾಗ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಗಬ್ಗಲ್ ಗ್ರಾಮದಲ್ಲಿ ನಡೆದಿದೆ.

46 ವರ್ಷದ ಪ್ರಸನ್ನ ಸಾಲ್ದಾನ ಮೃತ ಕಾಫಿ ಬೆಳೆಗಾರ. ಮೃತ ಪ್ರಸನ್ನ ತನ್ನ  ಕಾಫಿ ತೋಟಕ್ಕೆ ಕಬ್ಬಿಣದ ಏಣಿಯನ್ನ ಕೊಂಡೊಯ್ಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಬ್ಬಿಣದ ಏಣಿಯಾದ ಕಾರಣ ವಿದ್ಯುತ್ ಸ್ಪರ್ಶಿಸಿದ ಕೂಡಲೇ ಸಾಲ್ದಾನ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಗುರುವಾರ ಮಧ್ಯಾಹ್ನ  ಮನೆಯಿಂದ ಏಣಿಯನ್ನ ಕೊಂಡೊಯ್ಯುವಾಗ ಗಬ್ಗಲ್ ಗ್ರಾಮದ ಶಾಲೆ ಪಕ್ಕ ಎತ್ತರದ ಪ್ರದೇಶದಲ್ಲಿ ಏಣಿಯನ್ನ ಹೊತ್ತುಕೊಂಡು ಹೋಗುವಾಗ ಏಣಿ ವಿದ್ಯುತ್ ತಂತಿಗೆ ತಗುಲಿ ಸಾವನಪ್ಪಿದ್ದಾರೆ.

ಮಲೆನಾಡಿನಲ್ಲಿ ಭಾರೀ ಗಾಳಿ-ಮಳೆಗೆ ವಿದ್ಯುತ್ ತಂತಿಗಳು ಕೂಡ ಜಗ್ಗಿದ್ದವು. ಅತ್ಯಂತ ಕೆಳಭಾಗದಲ್ಲಿ ಇದ್ದ ವಿದ್ಯುತ್ ತಂತಿಗಳಿಂದ ಈ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಪ್ರಸನ್ನ ಸಾಲ್ದಾನ ಸಣ್ಣ ಕಾಫಿ ಬೆಳೆಗಾರರಾಗಿದ್ದರು. ಅವರ ತಂದೆ ಇತ್ತೀಚೆಗೆ ಮೃತಪಟ್ಟಿದ್ದರು. ಸಾಲ್ದಾನ ತನ್ನ ತಾಯಿಯೊಂದಿಗೆ ವಾಸವಾಗಿದ್ದರು

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ