sidilu2

 

 

ಗದ್ದೆನಾಟಿ ಮಾಡುವಾಗ ಸಿಡಿಲು ಬಡಿದು ಹಲವು ಮಹಿಳೆಯರಿಗೆ ಗಾಯವಾಗಿದ್ದು, ಓರ್ವ ಮಹಿಳೆ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನಲ್ಲಿ ಭಾನುವಾರ ಈ ಘಟನೆ ನಡೆದಿದೆ. ಬೇಲೂರು ತಾಲ್ಲೂಕು ಕೋರ್ಲಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಕೋರ್ಲಗದ್ದೆ ಗ್ರಾಮದ ಕೆ.ಬಿ. ಚಂದ್ರು ಎಂಬುವವರ ಗದ್ದೆಯಲ್ಲಿ ಒಟ್ಟು 25 ಮಂದಿ ಮಹಿಳೆಯರು ನಾಟಿ ಕಾರ್ಯದಲ್ಲಿ ತೊಡಗಿದ್ದರು. ಮಧ್ಯಾಹ್ನ ಸಮಯದಲ್ಲಿ ಏಕಾಏಕಿ ಸಿಡಿಲು ಬಡಿದಿದ್ದು, ಸಿಡಿಲಾಘಾತದಿಂದ ಗದ್ದೆಯಲ್ಲಿ ನಾಟಿ ಮಾಡುತ್ತಿದ್ದ ಹಲವು ಮಹಿಳೆಯರು ಅಸ್ವಸ್ಥರಾಗಿದ್ದಾರೆ. ಒಟ್ಟು 17 ಮಂದಿ ಮಹಿಳೆಯರಿಗೆ ಸಿಡಿಲಿನಿಂದ ಗಾಯಗೊಂಡಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಗಾಯಗೊಂಡ ಮಹಿಳೆಯರನ್ನು ತಕ್ಷಣ ಸಕಲೇಶಪುರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ