dampathi

 

 

ಹೇಮಾವತಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ  ಶರಣಾಗಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಘಟನೆ ನಡೆದಿದೆ. 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ದಂಪತಿ ಮೃತಪಟ್ಟಿದ್ದಾರೆ. ಶ್ರೀನಿವಾಸ್ (43), ಶ್ವೇತಾ (36) ಹಾಗೂ ನಾಗಶ್ರೀ (13) ಮೃತ ದುರ್ದೈವಿಗಳು.

ಶ್ರೀನಿವಾಸ್‌ ಕಾರು ಚಾಲಕರಾಗಿದ್ದರೆ, ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಕಳೆದ ಮಂಗಳವಾರ ಈ ಮೂವರು ಏಕಾಏಕಿ ಕಾಣಿಯಾಗಿದ್ದರು. ಸಂಬಂಧಿಗಳು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಆದರೆ ಇವರ ಸುಳಿವು ಸಿಕ್ಕಿರಲಿಲ್ಲ.

ಕುಟುಂಬಸ್ಥರು ನಂತರ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಿನ್ನೆ ಬುಧವಾರ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದೆ. ಹೇಮಾವತಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಅಗ್ನಿಶಾಮಕ ದಳದ‌ ಸಿಬ್ಬಂದಿ ಹಾಗೂ ಪೊಲೀಸರು ದಂಪತಿಯ ಶವವನ್ನು ಹೊರ ತೆಗೆದಿದ್ದಾರೆ. ಸದ್ಯ ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಎಸ್‌ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶ್ರೀನಿವಾಸ್‌ ಸಾಕಷ್ಟು ಸಾಲ ಮಾಡಿಕೊಂಡಿದ್ದರು.   ಸಾಲಬಾಧೆಯಿಂದ ಕುಟುಂಬ ಸಮೇತ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ