kaadane 2

 

 

ಸಂಬಂಧಿಕರ ಮನೆಗೆ ಬಂದಿದ್ದ ವ್ಯಕ್ತಿಯೋರ್ವರನ್ನು ಕಾಡಾನೆಯೊಂದು ಅಟ್ಟಾಡಿಸಿಕೊಂಡು ಬಂದಾಗ ವ್ಯಕ್ತಿಯೊಬ್ಬರು ಬಿದ್ದು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಬಂದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಉದೇವಾರ ಗ್ರಾಮದಲ್ಲಿ ಘಟನೆ ನಡೆದಿದೆ.

ಕೋಲಾರ ಮೂಲದ ನಾಗೇಶ್ (35) ಎಂಬುವವರು ಸಕಲೇಶಪುರ ಸಮೀಪದ ಉದೇವಾರ ಗ್ರಾಮದಲ್ಲಿದ್ದ ತಮ್ಮ ಅತ್ತೆ ಮನೆಗೆ ಬಂದಿದ್ದರು. ಸಮೀಪದಲ್ಲಿದ್ದ  ಅಂಗಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಪಕ್ಕದ ತೋಟದಿಂದ  ಬಂದ ಕಾಡಾನೆಯೊಂದು ನಾಗೇಶ್‌ರನ್ನು ಅಟ್ಟಿಸಿಕೊಂಡು ಬಂದಿದೆ.

ಕಾಡಾನೆಯಿಂದ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿದ ನಾಗೇಶ್‌ ಗಾಬರಿಯಲ್ಲಿ ಮುಗ್ಗರಿಸಿ ಬಿದ್ದಿದ್ದಾರೆ. ಆನೆ ಒಂದಷ್ಟು ದೂರು ನಾಗೇಶ್ ಅವರನ್ನು ಅಟ್ಟಿಸಿಕೊಂಡು ಬಂದು ನಂತರ ತೋಟದಲ್ಲಿ ಮರೆಯಾಗಿದೆ.  ಮುಗ್ಗರಿಸಿ ಬಿದ್ದ ರಭಸಕ್ಕೆ ತೀವ್ರ ಗಾಯಗೊಂಡಿದ್ದಾರೆ. ನಾಗೇಶ್‌  ಸಕಲೇಶಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಗಾಯಾಳು ಆರೋಗ್ಯ ವಿಚಾರಣೆಗೆ ಅರಣ್ಯಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ