jay shah

 

 

ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು  ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಯ್ ಶಾ ಅವರು ಜಾಗತಿಕ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿ ಆಯ್ಕೆಯಾಗಿರುವ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದಾರೆ.   ಡಿಸೆಂಬರ್ 1, 2024 ರಿಂದ ಜಯ್ ಶಾ ಐಸಿಸಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಜಯ್ ಶಾ ಅವರು ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

35 ವರ್ಷದ ಜಯ್ ಶಾ ಅವರು ಜಾಗತಿಕ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಅತ್ಯಂತ ಕಿರಿಯ ವ್ಯಕ್ತಿಯಾಗಲಿದ್ದಾರೆ. ಜಗಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್ ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್ ನಂತರ ಐಸಿಸಿಯನ್ನು ಮುನ್ನಡೆಸಲಿರುವ ಭಾರತದಿಂದ ಐದನೇ ವ್ಯಕ್ತಿ ಜಯ್ ಶಾ ಆಗಲಿದ್ದಾರೆ.

ಜಯ್ ಶಾ ಅವರು ಪ್ರಸ್ತುತ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಕಾರ್ಯದರ್ಶಿಯಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರರಾಗಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ