balasubramanya

ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಅಗ್ರಹಾರ ಶ್ರೀ ಆದಿಸುಬ್ರಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸಂಚಾಲಕ, ಹಿರಿಯ ಕಾಫಿ ಬೆಳೆಗಾರ ಆರ್. ಬಾಲಸುಬ್ರಮಣ್ಯ (63 ವರ್ಷ) ನಿಧನಹೊಂದಿದ್ದಾರೆ.

ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಆರ್. ಬಾಲಸುಬ್ರಮಣ್ಯ ಅವರು ಉತ್ತಮ ಕಾಫಿ ಬೆಳೆಗಾರರಾಗಿದ್ದರು. ಕೃಷಿಯೊಂದಿಗೆ ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಜಿ. ಅಗ್ರಹಾರ ಶ್ರೀ ಆದಿಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಅಭಿವೃದ್ಧಿಯಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು. ದೇವಸ್ಥಾನದ ಧಾರ್ಮಿಕ ಕಾರ್ಯಗಳು, ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಮುಂಚೂಣಿಯಲ್ಲಿ ನಿಂತು ಜವಾಬ್ದಾರಿ ನಿರ್ವಹಿಸುತ್ತಿದ್ದರು.

ಮೂಡಿಗೆರೆ ಲಯನ್ಸ್ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೂಡಿಗೆರೆ ತಾಲ್ಲೂಕು ಬ್ರಾಹ್ಮಣ ಮಹಾಸಭಾದ ಮಾಜಿ ಅಧ್ಯಕ್ಷರಾಗಿದ್ದರು.

ಆರ್. ಬಾಲಸುಬ್ರಮಣ್ಯ ಅವರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ಇಂದು(ಮಂಗಳವಾರ) ಮಧ್ಯಾಹ್ನ ಗೋಣಿಬೀಡಿನ ಅವರ ಸ್ವಗೃಹದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ