b m sandeep

 

 

ಕಾಂಗ್ರೇಸ್ ರಾಷ್ಟ್ರೀಯ ಕಾರ್ಯಕಾರಿಣಿ ಕಾರ್ಯದರ್ಶಿಯಾಗಿ ಚಿಕ್ಕಮಗಳೂರಿನ ಯುವ ಮುಖಂಡ ಬಿ.ಎಂ. ಸಂದೀಪ್ ಅವರು ನೇಮಕವಾಗಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು  ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮತ್ತು ನಗರ ಕಾಂಗ್ರೆಸ್ ವತಿಯಿಂದ ಸಲ್ಲಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಬಿ.ಎಂ. ಸಂದೀಪ್ ; ಕಾಂಗ್ರೇಸ್ ಪಕ್ಷ ಸದಾ ಸಾಮಾಜಿಕ ನ್ಯಾಯ-ಸಂವಿಧಾನದ ಆಶಯಗಳ ಪರವಾಗಿದ್ದು, ಧ್ವನಿ ಇಲ್ಲದ ಜನರ ಸೇವೆ ಮಾಡಬೇಕು ಎಂಬುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಉದ್ದೇಶವಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ ಸಂದೀಪ್ ತಿಳಿಸಿದರು.

ಹಿಂದೆ ನಗರ ಯುವ ಕಾಂಗ್ರೆಸ್‌ಗೆ ಆಯ್ಕೆಯಾದ ತನ್ನನ್ನು ಪಕ್ಷದ ಹಿರಿಯ ಮುಖಂಡರ ಸಹಕಾರದಿಂದ ಕೆಪಿಸಿಸಿ ಕಾರ್ಯದರ್ಶಿಯಾಗಿ ನೇಮಕವಾಗಿದ್ದೆ, ಅನುಭವದ ಜೊತೆಗೆ ಪಕ್ಷಕ್ಕೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂಬ ಗುರಿ ಹೊಂದಿದ್ದೇನೆಂದರು.

ಪಕ್ಷನಿಷ್ಠೆಯಿಂದ ಕೆಲಸ ಮಾಡಿದರೆ ಅವಕಾಶಗಳು ತಾವಾಗೇ ಲಭ್ಯವಾಗುತ್ತವೆ ಎನ್ನುವುದಕ್ಕೆ ತಾನು ಸ್ಪಷ್ಟ ಉದಾಹರಣೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ ಮಾತನಾಡಿ, ಪಕ್ಷ ನೀಡಿದ ಜವಾಬ್ದಾರಿಯನ್ನು ಸರಿಯಾಗಿ, ಸಮರ್ಪಕವಾಗಿ ನಿಭಾಯಿಸಿದಾಗ ಪಕ್ಷ ನಮ್ಮನ್ನು ಗುರ್ತಿಸುತ್ತದೆ, ರಾಜಕೀಯ ಬೇಡ ಎಂದು ತೀರ್ಮಾನಿಸಿದ್ದ ನನಗೆ ಕಾಂಗ್ರೆಸ್ ಪಕ್ಷ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಟಿಕೆಟ್ ನೀಡಿ ಗೆದ್ದು ಅಧ್ಯಕ್ಷರೂ ಆಗಿದ್ದೆ ಎಂದು ವಿವರಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಡಿ.ಎಲ್ ವಿಜಯಕುಮಾರ್ ಮಾತನಾಡಿ, 21 ರಾಜ್ಯಗಳಲ್ಲಿ ಬಿ.ಎಂ ಸಂದೀಪ್ ಉತ್ತಮ ಕೆಲಸ ಮಾಡುವ ಮೂಲಕ ಮತ್ತೊಮ್ಮೆ ಮೂರನೇ ಬಾರಿಗೆ ಕೆಲಸ ಮಾಡಲು ಎಐಸಿಸಿ ಅವಕಾಶ ಕಲ್ಪಿಸಿದೆ. ಎಂದರು.

ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ ಮಾತನಾಡಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ