beluru

 

 

ಹಾಸನ ಜಿಲ್ಲೆ ಬೇಲೂರು ಪಟ್ಟಣದ ಪ್ಲಾಂಟರ್ಸ್ ಕ್ಲಬ್ ನಲ್ಲಿ ದುರ್ವರ್ತನೆ ತೋರಿದ ಆರೋಪದ ಮೇಲೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಬೇಲೂರು ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ಸುಬ್ರಮಣ್ಯ, ಸಬ್ ಇನ್ಸ್ ಪೆಕ್ಟರ್ ಪ್ರವೀಣ್ ಮತ್ತು ಹಳೇಬೀಡು ಠಾಣೆಯ  ಇನ್ಸ್ ಪೆಕ್ಟರ್ ಜಯರಾಂ ಅಮಾನತಾದ ಅಧಿಕಾರಿಗಳು.

ಸೆಪ್ಟಂಬರ್ 3 ರಂದು ಪ್ಲಾಂಟರ್ಸ್ ಕ್ಲಬ್ ನಲ್ಲಿ ಏರ್ಪಡಿಸಿದ್ದ ಪಾರ್ಟಿಯೊಂದರಲ್ಲಿ ಭಾಗವಹಿಸಿದ್ದ ಈ ಮೂವರು ಅಧಿಕಾರಿಗಳು ಪಾರ್ಟಿಯ ಸಂದರ್ಭದಲ್ಲಿ ಕ್ಲಬ್ ನ ಸಿಬ್ಬಂದಿಗಳೊಂದಿಗೆ ಕಿರಿಕ್ ಮಾಡಿ ಅವರ ಮೇಲೆ ದರ್ಪ ತೋರಿ, ಬೆದರಿಕೆ ಹಾಕಿದ್ದರು. ಪೊಲೀಸ್ ಅಧಿಕಾರಿಗಳ ದುರ್ವರ್ತನೆ ಕ್ಲಬ್ ನ ಸಿಸಿ ಕ್ಯಾಮರದಲ್ಲಿ ಸೆರೆಯಾಗಿತ್ತು.

ಈ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ತನಿಖಾ ವರದಿಯನ್ನು ಆದರಿಸಿ ಹಾಸನ ಜಿಲ್ಲಾ ಎಸ್ಪಿ ಮಹಮ್ಮದ್ ಸುಜೀತಾ ಈ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ