IMG-20240914-WA0405 (1)

 

 

ಮೂಡಿಗೆರೆ ತಾಲ್ಲೂಕಿನ ಬಣಕಲ್ ನಜರೆತ್ ಶಾಲೆಯಲ್ಲಿ ಮಾದಕ ವಸ್ತುಗಳ ಬಳಕೆಯಿಂದ ದುಷ್ಪರಿಣಾಮಗಳ ಬಗ್ಗೆ ಕಾನೂನು ಅರಿವು ಕಾರ್ಯಾಗಾರ ನಡೆಯಿತು.

ಬಾಳೂರು ಠಾಣೆಯ ಸಬ್ ಇನ್ ಸ್ಪೆಕ್ಟರ್ ದಿಲೀಪ್ ಕುಮಾರ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ”  ವಿದ್ಯಾರ್ಥಿಗಳಿಗೆ ಓದಿನ ಜೊತೆಗೆ  ಕಾನೂನಿನ ಅರಿವು ಅಗತ್ಯವಾಗಿದೆ. ಸಮಾಜದಲ್ಲಿ ಕಾನೂನು ಉಲ್ಲಂಘನೆಯಾದಾಗ ಹಾಗೂ ಅಶಾಂತಿ ವಾತಾವರಣ ಉಂಟಾದಾಗ ವಿದ್ಯಾರ್ಥಿಗಳು ಕಾನೂನು ಪಾಲಿಸಿ ಸಾಮಾಜಿಕ ಬದಲಾವಣೆಗೆ ಕಾರಣರಾಗಬೇಕು. ಸಮಾಜವನ್ನು ಪರಿವರ್ತನೆ ಮಾಡಲು ಮಹತ್ವಾಕಾಂಕ್ಷೆ ಗುರಿ ಇಟ್ಟುಕೊಂಡು ಮುನ್ನಡೆಯಬೇಕು ಎಂದರು.

ಪ್ರತಿಯೊಬ್ಬ ಪ್ರಜೆಗೂ ಹುಟ್ಟಿನಿಂದ ಸಾಯುವವರೆಗೂ ಕಾನೂನಿನ ಅಗತ್ಯತೆ ಪ್ರಸ್ತುತ ಸಂದರ್ಭದಲ್ಲಿ ಅವಶ್ಯಕವಿದೆ. ದೇಶದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸಲಾಗಿದೆ. ಎಲ್ಲ ಕಾನೂನುಗಳನ್ನು ತಿಳಿದುಕೊಳ್ಳಲು ಸಾಧ್ಯವಾಗದೇ ಇರಬಹುದು. ಆದರೂ ನಮ್ಮ ದೈನಂದಿನ ಜೀವನ ಯಾವುದೇ ಜೀವನದಲ್ಲಿ ಅಡೆತಡೆಯಿಲ್ಲದೇ ನೆಮ್ಮದಿಯಿಂದ ಸಾಗಲು ಅಲ್ಪ ಪ್ರಮಾಣದಲ್ಲಾದರೂ ಕಾನೂನು ಜಾಗೃತಿ  ಪಡೆಯಬೇಕು. ಉನ್ನತ ಆಡಳಿತ  ಹುದ್ದೆಗಳಲ್ಲಿ ಕರ್ತವ್ಯ ಮಾಡುವುದರ  ಮೂಲಕವಾಗಿ ಸದೃಢ  ದೇಶ ಕಟ್ಟುವ ಮನಸ್ಸು ವಿದ್ಯಾರ್ಥಿಗಳಲ್ಲಿ  ಇರಬೇಕಾಗಿದೆ.  ಮಕ್ಕಳು  ಮಾದಕ ವಸ್ತುಗಳ ಕಡೆ ಗಮನ ಹರಿಸದೇ ಓದಿನ ಕಡೆ ಹೆಚ್ಚಿನ ಗಮನ ನೀಡಬೇಕು. ಇಂದಿನ ಆಧುನಿಕ ಯುಗದಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿವೆ. ಮೊಬೈಲ್, ಕಂಪ್ಯೂಟರ್ ಮೂಲಕ ತಾಂತ್ರಿಕತೆಯನ್ನು ಬಳಸಿಕೊಂಡು ಜಾಲತಾಣಗಳಲ್ಲಿ ಮೋಸ ಮಾಡಲಾಗುತ್ತಿದೆ. ಇಂತಹ ಅಪರಾಧಗಳಿಂದ ಜನರು ದೂರವಿರಬೇಕು. ಪೋಕ್ಸೋ ಪ್ರಕರಣದಿಂದ ಮಕ್ಕಳು ದೂರವಿರಬೇಕು. ಇಂತಹ ಪ್ರಕರಣಗಳಿಂದ ವಿದ್ಯಾರ್ಥಿಗಳು ಜಾಗೃತರಾಗಬೇಕು.

ಮಾದಕ ವಸ್ತುಗಳಾದಂತಹ ಅಪೀಮು, ಗಾಂಜಾ, ಗುಟ್ಕಾ, ಮದ್ಯಪಾನಗಳಿಂದ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೇ. ಉತ್ತಮ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ. ಉತ್ತಮ ಗೆಳೆಯರ ಸಹವಾಸ ಮಾಡಿ ಸದ್ಗುಣಗಳನ್ನು ಬೆಳೆಸಿಕೊಳ್ಳಬೇಕು’ ಎಂದರು.

ಶಾಲೆಯ ಪ್ರಾಂಶುಪಾಲೆ ಸಿಸ್ಟರ್ ಹಿಲ್ಡಾ ಲೋಬೊ, ಸಿಬ್ಬಂದಿ ಲವಕುಮಾರ್,  ಶಿಕ್ಷಕರಾದ  ಚಂದನ, ರೇಖಾ, ಅನುಶ್ರೀ, ಸಾಂಘವಿ, ರಜಿನಿ, ವಿನುತಾ ಸೆರಾವೋ, ರೇಷ್ಮಾ ಪಿರೇರಾ, ಸಿಸ್ಟರ್ ಅಮಲ್ ರಾಣಿ, ರುಕ್ಷವಿ, ಗಾಯಿತ್ರಿ, ಅಬಿದ, ನಸ್ರಿನ್ ಇದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ