kisor

 

 

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿದ್ದ ವಿಧಾನಪರಿಷತ್ ಸ್ಥಾನಕ್ಕೆ ಪುತ್ತೂರಿನ ಕಿಶೋರ್ ಕುಮಾರ್ ಬೋಟ್ಯಾಡಿಯವರಿಗೆ ಬಿಜೆಪಿ ತನ್ನ ಟಿಕೆಟ್ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ಗೆ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿಯು ಪುತ್ತೂರಿನ ಕಿಶೋರ್ ಕುಮಾರ್ ಬೊಟ್ಯಾಡಿಗೆ ಟಿಕೆಟ್ ಘೋಷಿಸಿದೆ.

ಸಂಘಪರಿವಾರದ ಹಿನ್ನೆಲೆಯ ಕಿಶೋರ್ ಕುಮಾರ್ ಬೊಟ್ಯಾಡಿ ಕಳೆದ ವಿಧಾನ ಸಭಾ ಚುನಾವಣೆಯ ಸಂದರ್ಭ ಪುತ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಬಾರಿ ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿಯ ದ.ಕ.‌ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತಿತರರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಅವರನ್ನೆಲ್ಲ ಹಿಂದಿಕ್ಕಿ ಟಿಕೆಟ್ ದಕ್ಕಿಸಿಕೊಳ್ಳುವಲ್ಲಿ ಕಿಶೋರ್ ಕುಮಾರ್ ಯಶಸ್ವಿಯಾಗಿದ್ದಾರೆ.

ಸವಿತಾ ಸಮಾಜಕ್ಕೆ ಸೇರಿದ ಕಿಶೋರ್ ಕುಮಾರ್ ಪ್ರಸ್ತುತ ದಕ್ಷಿಣ ಕನ್ನಡ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ