2Mudigere2A Girish

 

 

ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಚೆಸ್ ಅಸೋಸಿಯೇಷನ್ ಕಾರ್ಯದರ್ಶಿ ಗಿರೀಶ್  ಮಣ್ಣಿಕೆರೆ ಅವರು ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಕಾಸಿಯಾ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್‍ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗಿರೀಶ್ ಮಣ್ಣಿಕೆರೆ ಅವರು ಅತ್ಯದಿಕ ಬಹುಮತಗಳಿಂದ ಆಯ್ಕೆಯಾಗಿದ್ದಾರೆ. ರಾಜ್ಯ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ತುಮಕೂರಿನ ಟಿ.ಎನ್. ಮಧುಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ಜನ್ನಾಪುರ ಸಮೀಪದ ಮಣ್ಣಿಕೆರೆ ಗ್ರಾಮದ ಗಿರೀಶ್ ಹಲವು ವರ್ಷಗಳಿಂದ ರಾಜ್ಯ ಮತ್ತು ಜಿಲ್ಲಾ ಚೆಸ್ ಅಸೋಷಿಯೇಷನ್ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಕಳೆದ ಅವಧಿಯಲ್ಲಿ ರಾಜ್ಯ ಚೆಸ್ ಅಸೋಷಿಯೇಷನ್ ಸಹಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಗಿರೀಶ್ ಅವರು ಚಿಕ್ಕಮಗಳೂರು ಜಿಲ್ಲಾ ಚೆಸ್ ಅಸೋಷಿಯೇಷನ್ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಪುತ್ರ ಪ್ರೇರಣ್ ರಾಜ್ಯ ಮತ್ತು ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದು, ಅನೇಕ ಪ್ರಶಸ್ತಿಗಳನ್ನು ಗಳಿಸಿದ್ದಾರೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ