8ckm2

 

 

ಚಿಕ್ಕಮಗಳೂರಿನಲಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ 44ನೇ ರಾಜ್ಯ ಮಟ್ಟದ ಕಬ್ ಮತ್ತು ಬುಲ್ ಬುಲ್ ಉತ್ಸವದ ಅಂಗವಾಗಿ  ವಿವಿಧ ಪ್ರದರ್ಶನ ಮತ್ತು ಕಾರ್ಯಕ್ರಮಗಳನ್ನು ಉದ್ಘಾಟಿಸಲಾಯಿತು.

ಸಾಹಸಮಯ ಕ್ರೀಡಾ ಚಟುವಟಿಕೆಗಳ ಉದ್ಘಾಟನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರಾದ ಮಂಜುಳಾ ಹುಲಹಳ್ಳಿ ನೆರವೇರಿಸಿದರು. ಕರಕುಶಲ ಪ್ರತಿಭಾ ಪ್ರದರ್ಶನವನ್ನು ಸೆಂಟ್ ಮೇರಿಸ್ ಇಂಟರ್ ನ್ಯಾಷನಲ್ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಜರಾಲ್ಡ್ ಲೋಬೋ, ವಸ್ತು ಪ್ರದರ್ಶನವನ್ನು ಬಿಜಿಎಸ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಸುರೇಂದ್ರ, ಶಿಬಿರಾಗ್ನಿ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ ರಮೇಶ್ ಉದ್ಘಾಟಿಸಿದರು.

ಸಾಹಸ ಕ್ರೀಡಾ ಚಟುವಟಿಕೆಗಳಾದ ಹೈವೆ ಬ್ರಿಡ್ಜ್, ಮೆರಿಗೋ ರೌಂಡ್ ಮುಂತಾದ ಸಾಹಸ ಕ್ರೀಡಾ ಚಟುವಟಿಕೆಗಳಲ್ಲಿ ಕಬ್ ಮತ್ತು ಬುಲ್ ಬುಲ್ ಎಳೆಯರು ಉತ್ಸಾಹದಿಂದ ಪಾಲ್ಗೊಂಡರು. ಕರಕುಶಲ ಹಾಗೂ ವಸ್ತು ಪ್ರದರ್ಶನ ಜನಮನ ಸೆಳೆಯಿತು.

ಈ ಸಂದರ್ಭದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಉಪಾಧ್ಯಕ್ಷ ಎ.ಎನ್ ಮಹೇಶ್, ಜಿಲ್ಲಾ ಮುಖ್ಯ ಆಯುಕ್ತ ಷಡಾಕ್ಷರಿ, ರಾಜ್ಯ ಸಂಚಾಲಕ ಎಲ್.ಟಿ.ಲೋಕೇಶ್, ಜಿಲ್ಲಾ ಕಾರ್ಯದರ್ಶಿ ನೀಲಕಂಠ ಆಚಾರ್, ಜಿಲ್ಲಾ ಖಜಾಂಚಿ ರಮೇಶ್, ಜಿಲ್ಲಾ ಗೈಡ್ಸ್ ಆಯುಕ್ತೆ ಮಮತಾ, ಜಿಲ್ಲಾ ಸ್ಕೌಟ್ಸ್ ಆಯುಕ್ತ ಫಣಿರಾಜ್, ಪದಾಧಿಕಾರಿಗಳಾದ ಸಂಗಮನಾಥ್, ಪ್ರಸನ್ನ, ರುಕ್ಮಿಣಿ, ಭಾರತಿ, ನಂದಕುಮಾರ್, ಷಣ್ಮುಖ ಸುಂದರಂ, ಕಿರಣಕುಮಾರ್, ರಕ್ಷಿತ್ ಬಾಳೂರು, ಮುಂತಾದವರು ಇದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ