ಮುಳ್ಳಯ್ಯನಗಿರಿ ರಸ್ತೆಯಲ್ಲಿ ಕಾರೊಂದು ಸುಮಾರು 250 ಅಡಿ ಎತ್ತರದ ಪ್ರದೇಶದಿಂದ ಕೆಳಗೆ ಬಿದ್ದಿದೆ.
ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ತೆಲಂಗಾಣ ಮೂಲದ ಕಾರು, ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಸಮೀಪದ ಕವಿಕಲ್ ಗಂಡಿ ಬಳಿ ಘಟನೆ ನಡೆದಿದೆ.
ಕಾರಿನಲ್ಲಿ ಐವರಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 250 ಅಡಿ ಎತ್ತರದಿಂದ ಬೀಳುವಾಗ ಮರ, ರೆಂಬೆ-ಕೊಂಬೆಗಳಿಗೆ ಸಿಲುಕಿದ್ದರಿಂದ ಕಾರು ಬೀಳುವ ವೇಗ ಕಡಿಮೆಯಾಗಿದೆ, ಪ್ರಾಯಾಣಿಕರು ಹೆಚ್ಚಿನ ಅಪಾಯದಿಂದ ಪಾರಾಗಿದ್ದಾರೆ.
ಮರದ ರೆಂಬೆ-,ಕೊಂಬೆಗಳಿಗೆ ಸಿಲುಕಿ ಕಾರು ಕಂದಕದಲ್ಲಿಯೇ ನಿಂತಿದೆ. ಪೊಲೀಸರು ಹಾಗೂ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.




