ಕೊಟ್ಟಿಗೆಹಾರದ ತರುವೆ ಏಕಲವ್ಯ ಮಾದರಿ ವಸತಿ ಶಾಲೆ ತಂಡ ಚಿಕ್ಕಮಗಳೂರು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಳೆಹೊನ್ನೂರಿನಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯ ಬಾಲಕೀಯರ ಕಬಡ್ಡಿ ಪಂದ್ಯಾವಳಿಯಲ್ಲಿ ಏಕಲವ್ಯ ಶಾಲೆಯ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ಕಡೂರಿನಲ್ಲಿ ನಡೆಯುವ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ರವೀಂದ್ರ,ಶಿಕ್ಷಕ ಎಚ್.ಎಸ್.ರವಿ ಇದ್ದರು.


