ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಕಾಫಿ ತೋಟದಲ್ಲಿ ಸೆರೆಹಿಡಿಯಲಾಗಿದೆ. ಮೂಡಿಗೆರೆ ತಾಲ್ಲೂಕಿನ ದೇವರುಂದ ಗ್ರಾಮದ ನವಿಲುಗುಡ್ಡ ಎಸ್ಟೇಟ್ ನಲ್ಲಿ ಭಾನುವಾರ ಸುಮಾರು 15 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆಹಿಡಿಯಲಾಗಿದೆ.
ತೋಟದಲ್ಲಿ ಅಡಗಿ ಕುಳಿತ್ತಿದ್ದ ಕಾಳಿಂಗ ಸರ್ಪವನ್ನು ಸಕಲೇಶಪುರದ ಉರಗಪ್ರಿಯ ಸ್ನೇಕ್ ಅಹಮದ್ ಅವರು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ.
ಜನವಸತಿ ಪ್ರದೇಶದ ಸಮೀಪವೇ ಈ ಹಾವು ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿತ್ತು.
ಮಲೆನಾಡು ಭಾಗದಲ್ಲಿ ನಿರಂತರವಾಗಿ ಕಾಳಿಂಗ ಸರ್ಪಗಳು ಕಾಣಿಸಿಕೊಳ್ಳುತ್ತಿದ್ದು, ಇತ್ತೀಚೆಗೆ ಮೂಡಿಗೆರೆ ತಾಲ್ಲೂಕಿನ ಜಾರ್ಗಲ್ ಬಳಿ ಅಂಗನವಾಡಿ ಕೇಂದ್ರದ ಸಮೀಪವೇ ಒಂದು ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು.


